ಹುಬ್ಬಳ್ಳಿ: ಅಕ್ರಮವಾಗಿ ಎರಡು ತಲೆ ಹಾವು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಬಂಧಿಸಿ ಅವರಿಂದ ಕಾರು ವಶಪಡಿಸಿಕೊಳ್ಳುವಲ್ಲಿ ಬೆಂಡಿಗೇರಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಹುಬ್ಬಳ್ಳಿಯ ಗಬ್ಬೂರು ಬೈಪಾಸ್ ಬಳಿ ಎರಡು ತಲೆಯ ಹಾವನ್ನು ಮಾರಾಟ ಮಾಡಲು ಆರೋಪಿಗಳು ಆಗಮಿಸಿದ್ದರು. ಇದರ ಖಚಿತ ಮಾಹಿತಿಯ ಮೇರೆಗೆ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ಹಾವನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರು ರಾಯಚೂರು ಮೂಲದವರು ಎಂದು ತಿಳಿದು ಬಂದಿದೆ. ಸದ್ಯ ಆರೋಪಿಗಳ ವಿರುದ್ಧ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಅರಣ್ಯ ಸಂರಕ್ಷಣೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇದನ್ನೂ ಓದಿ: ನಕಲಿ ನಾಗಮಣಿ, ಎರಡು ತಲೆ ಹಾವು.. ಮೂವರು ಖದೀಮರು