ಧಾರವಾಡ: ಧಾರವಾಡದಲ್ಲಿ ಮತ್ತೆ ನೆತ್ತರು ಹರಿದಿದೆ. ರಾಮಸೇನಾದ ಜಿಲ್ಲಾಧ್ಯಕ್ಷನಿಂದ ಪ್ರೇಯಸಿಯ ಕೊಲೆ ಯತ್ನ ನಡೆದಿದೆ. ವಿಜಯ ಕದಮ ಹತ್ಯೆ ಮಾಡಲು ಮುಂದಾದ ಆರೋಪಿ.
ವಿಜಯ ತನ್ನ ಪ್ರೇಯಸಿಗೆ ಚಾಕುವಿನಿಂದ ಇರಿದಿದ್ದಾನೆ. ನಂತರ ಉಪನಗರ ಠಾಣೆಗೆ ಶರಣಾಗಿದ್ದಾನೆ. 7 ವರ್ಷಗಳಿಂದ ಇವರಿಬ್ಬರ ನಡುವೆ ಸಂಬಂಧ ಇತ್ತು ಎನ್ನಲಾಗಿದೆ. ಸ್ಥಳಕ್ಕೆ ಉಪನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರೇಯಸಿಯನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.
ಇದನ್ನು ಓದಿ:ಪಿಎಸ್ಐ ಕಿರುಕುಳ ಶಂಕೆ: ಹಣ ಕದ್ದ ಆರೋಪ ಎದುರಿಸುತ್ತಿದ್ದ ಯುವಕ ಆತ್ಮಹತ್ಯೆ