ETV Bharat / state

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಟೋಚಾಲಕರಿಂದ ಪ್ರತಿಭಟನೆ - Auto Driver Protest in Hubli

ಸದ್ಯದ ಪರಿಸ್ಥಿತಿಯಲ್ಲಿ ಪೆಟ್ರೋಲ್ ತೈಲ ಬೆಲೆ ಗಗನಕ್ಕೇರಿದೆ. ಇದರಿಂದಾಗಿ ಜೀವನ‌ ನಡೆಸುವುದು ಕಷ್ಟವಾಗಿದೆ. ಆದ್ದರಿಂದ ಕೂಡಲೇ ರಾಜ್ಯ ಸರ್ಕಾರ ಆಟೋಚಾಲಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದ್ರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ..

auto-driver-protest-in-hubli
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಟೋ ಚಾಲಕರ ಸಂಘದಿಂದ ಪ್ರತಿಭಟನೆ
author img

By

Published : Sep 21, 2020, 9:51 PM IST

ಹುಬ್ಬಳ್ಳಿ: ರಾಜ್ಯ ಸರ್ಕಾರ ಆಟೋ ರಿಕ್ಷಾ ಚಾಲಕರಿಗೆ ಕೊರೊನಾ ಪರಿಹಾರ ನೀಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಆಟೋ ಚಾಲಕರ, ಮಾಲೀಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಟೋ ಚಾಲಕರ ಸಂಘದಿಂದ ಪ್ರತಿಭಟನೆ

ನಗರದ ತಹಶೀಲ್ದಾರರ ಕಚೇರಿ ಎದುರುಗಡೆ ಪ್ರತಿಭಟನೆ ಮಾಡಿದ ನಡೆಸಿದ ಆಟೋಚಾಲಕರು, ಲಾಕ್​ಡೌನ್​ ಸಂದರ್ಭದಲ್ಲಿ ಹಲವಾರು ಆಟೋಚಾಲಕರ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದವು. ಆದ್ದರಿಂದ ಆಟೋ ಚಾಲಕರು ಪ್ರತಿಭಟನೆ ಮಾಡಿ ಸರ್ಕಾರಕ್ಕೆ ಮನವಿ ಮಾಡಿದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಚಾಲಕರಿಗೆ ₹5000 ಪರಿಹಾರ ಘೋಷಣೆ ಮಾಡಿತ್ತು. ಆದರೆ, ಪರಿಹಾರ ಮಾತ್ರ ನಿಜ ಫಲಾನುಭವಿಗಳಿಗೆ ಸಿಕ್ಕಿಲ್ಲ ಎಂದು ಆರೋಪಿಸಿದರು.

ಸದ್ಯದ ಪರಿಸ್ಥಿತಿಯಲ್ಲಿ ಪೆಟ್ರೋಲ್ ತೈಲ ಬೆಲೆ ಗಗನಕ್ಕೇರಿದೆ. ಇದರಿಂದಾಗಿ ಜೀವನ‌ ನಡೆಸುವುದು ಕಷ್ಟವಾಗಿದೆ. ಆದ್ದರಿಂದ ಕೂಡಲೇ ರಾಜ್ಯ ಸರ್ಕಾರ ಆಟೋಚಾಲಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದ್ರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.