ಹುಬ್ಬಳ್ಳಿ: ಆಟೋ ಚಾಲಕರಿಗೆ ಕೊರೊನಾ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಟೋ ಮಾಲೀಕರ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ತಹಶೀಲ್ದಾರರ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿದ ಅವರು, ಲಾಕ್ಡೌನ್ ಸಂದರ್ಭದಲ್ಲಿ ಹಲವಾರು ಆಟೋ ಚಾಲಕರ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದವು. ರಾಜ್ಯ ಸರ್ಕಾರ ಪರಿಹಾರ ನೀಡುವಂತೆ ಆಟೋ ಚಾಲಕರ ಸಂಘಟನೆಯಿಂದ ಪ್ರತಿಭಟನೆ ಮಾಡಿದ ನಂತರ ಸರ್ಕಾರ 5000 ರೂ. ಪರಿಹಾರ ಘೋಷಣೆ ಮಾಡಿತ್ತು. ಆದರೆ ಪರಿಹಾರವನ್ನು ಆಟೋ ಚಾಲಕರಿಗೆ ಮುಟ್ಟಿಸುವಲ್ಲಿ ಸರ್ಕಾರ ವಿಫಲವಾಗಿದೆ.
ಕೂಡಲೇ ಪರಿಹಾರ ಹಾಗೂ ಆಟೋ ಚಾಲಕರು ಮಾಡಿದ ಸಾಲವನ್ನು ಮನ್ನಾ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.