ಹುಬ್ಬಳ್ಳಿ : ಗೂಡ್ಸ್ ವಾಹನಗಳಲ್ಲಿ ಪ್ರಯಾಣಿಕರನ್ನು ಸಾಗಿಸುವುದು ಕಾನೂನು ಬಾಹಿರ ಎಂದು ಹುಬ್ಬಳ್ಳಿ ಸಂಚಾರಿ ಪೊಲೀಸರು ಸಾರ್ವಜನಿಕರಲ್ಲಿ ಜನಜಾಗೃತಿ ಮೂಡಿಸಿದರು.
ಹುಬ್ಬಳ್ಳಿ - ಧಾರವಾಡ ಸಂಚಾರಿ ಪೋಲಿಸರು ಶಾಲಾ ವಿದ್ಯಾರ್ಥಿಗಳ ಸಹಕಾರದೊಂದಿಗೆ ನಗರದ ಕಿತ್ತೂರ ರಾಣಿ ಚೆನ್ನಮ್ಮ ವೃತ್ತ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜನ ಜಾಗೃತಿ ಮೂಡಿಸಿದರು
ಗೂಡ್ಸ್ ವಾಹನಗಳಲ್ಲಿ ಪ್ರಯಾಣಿಕರನ್ನು ಸಾಗಿಸುವುದು ಕಾನೂನು ಬಾಹಿರವಾಗಿದ್ದು, ಜನರು ಗೂಡ್ಸ್ ವಾಹನದಲ್ಲಿ ಪ್ರಯಾಣ ಬೆಳೆಸುವುದನ್ನು ಬಿಟ್ಟು ಪ್ರಯಾಣಿಕ ವಾಹನಗಳಲ್ಲಿ ಸಂಚರಿಸುವಂತೆ ಮನವಿ ಮಾಡಿಕೊಂಡಿದ್ದಾರೆ.