ಧಾರವಾಡ: ವಾಹನ ಸವಾರರು ಹೆಲ್ಮೆಟ್ ಇಲ್ಲದೆ ರಸ್ತೆಯಲ್ಲಿ ಸಂಚರಿಸಿದರೆ ಅಪಾಯ ಎನ್ನುವುದನ್ನು ತಿಳಿಸಲು ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ನಗರದ ಬಾಂಡ್ಸ್ ಹಾಗೂ ರೋಟರಿ ಕ್ಲಬ್ ಸಹಯೋಗದಲ್ಲಿ ಸಂಚಾರಿ ಪೊಲೀಸರ ನೇತೃತ್ವದಲ್ಲಿ ನಗರದ ಜುಬ್ಲಿ ವೃತ್ತದಲ್ಲಿ ವಿದ್ಯಾರ್ಥಿಗಳು ಯಮನ ವೇಷ ತೊಟ್ಟು ಜಾಗೃತಿ ಮೂಡಿಸಿದರು. ಪ್ರತಿಯೊಬ್ಬ ವಾಹನ ಸವಾರರು ಹೆಲ್ಮೆಟ್ ಧರಿಸುವಂತೆ ನರ್ಸಿಂಗ್ ವಿದ್ಯಾರ್ಥಿಗಳು ರಸ್ತೆ ಅಪಘಾತದ ಸನ್ನಿವೇಷವನ್ನು ಬೀದಿ ನಾಟಕ ಮಾಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು.
ವಿದ್ಯಾರ್ಥಿಗಳು ಹೆಲ್ಮೆಟ್ ಧರಿಸುವುದು ಹಾಗೂ ಸಂಚಾರಿ ನಿಯಮಗಳನ್ನು ಪಾಲಿಸುವಂತೆ ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದು ಜನರ ಮೆಚ್ಚುಗೆಗೆ ಪಾತ್ರವಾಗಿದೆ.