ETV Bharat / state

ಧಾರವಾಡದಲ್ಲಿ ಬಜರಂಗದಳದಿಂದ ವಿಶೇಷ ಪೂಜೆ: ರಾಮನಾಮ ಜಪ - Dharwad latest news

ಇಂದು ಪ್ರಧಾನಿ ನರೇಂದ್ರ ಮೋದಿಯವರು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಸಿದ್ದು, ಈ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಸಂಘಟನೆ ಸದಸ್ಯರು ಸಿಹಿ‌ ಹಂಚಿ‌ ಸಂಭ್ರಮಿಸಿದರು.

Dharwad
Dharwad
author img

By

Published : Aug 5, 2020, 2:56 PM IST

ಧಾರವಾಡ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣದ ಭೂಮಿಪೂಜೆ ನೆರವೇರಿಸಿದ ಹಿನ್ನೆಲೆಯಲ್ಲಿ,ವಿಶ್ವ ಹಿಂದೂ ಪರಿಷತ್, ಬಜರಂಗದಳ ಸಂಘಟನೆಯಿಂದ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಲಾಯಿತು.

ಇಂದು ಪ್ರಧಾನಿ ನರೇಂದ್ರ ಮೋದಿಯವರು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದ ರಾಮ ಮಂದಿರ ಹಾಗೂ ಲೈನ್ ಬಜಾರ್​ ಹನುಮಂತ ದೇವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಸಂಘಟನೆ ಸದಸ್ಯರು ವಿಶೇಷ ಪೂಜೆ ಸಲ್ಲಿಸಿದರು. ನಂತರ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದ್ದರು.

ಈ ಸಂದರ್ಭದಲ್ಲಿ ಆರ್ ಎಸ್ ಎಸ್ ಮುಖಂಡರಾದ ಶ್ರೀಧರ ನಾಡಿಗೇರ, ಬಜರಂಗದಳದ ಜಿಲ್ಲಾ ಸಂಚಾಲಕ ಶ್ರೀನಿವಾಸ ಸತ್ತಿಗೇರ, ಸಹ ಸಂಚಾಲಕ ಅಕ್ಷಯ್ ಕುಲಕರ್ಣಿ, ಪ್ರಮೋದ್ ರಾಜೇಶ್,ಸೇರಿದಂತೆ ಕಾರ್ಯಕರ್ತರು ಇದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.