ETV Bharat / state

ಹು-ಧಾ ಮಹಾನಗರ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಲಾಬುರಾಮ್ - Hubballi Police commissioner

ಹುಬ್ಬಳ್ಳಿ-ಧಾರವಾಡ ವಿಭಾಗದ ಐಪಿಎಸ್ ಅಧಿಕಾರಿಗಳ ಮುಸುಕಿನ ಗುದ್ದಾಟಕ್ಕೆ ತಾರ್ಕಿಕ ಅಂತ್ಯ ಸಿಕ್ಕ ಬೆನ್ನಲ್ಲೇ, ಹು-ಧಾ ಮಹಾನಗರ ಪೊಲೀಸ್ ಆಯುಕ್ತರಾಗಿ ಲಾಬುರಾಮ್ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.

Baluram
ಅಧಿಕಾರ ವಹಿಸಿಕೊಂಡ ಲಾಬುರಾಮ್
author img

By

Published : Oct 22, 2020, 5:47 PM IST

ಹುಬ್ಬಳ್ಳಿ: ಹು-ಧಾ ಮಹಾನಗರ ಪೊಲೀಸ್ ಕಮೀಷನರ್ ಆಗಿ ಲಾಬುರಾಮ್ ಅವರು ಇಂದು ಹುಬ್ಬಳ್ಳಿಯ ನವನಗರದ ಕಮೀಷನರ್ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು.

ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಆಯುಕ್ತರಾಗಿದ್ದ ಆರ್.ದಿಲೀಪ್, ಲಾಬುರಾಮ್ ಅವರಿಗೆ ಅಧಿಕಾರ ಹಸ್ತಾಂತರ ಮಾಡುವ ಮೂಲಕ ಪುಷ್ಪ ಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು. ಹು-ಧಾ ಮಹಾನಗರ ಪೊಲೀಸ್ ಕಮೀಷನರೇಟ್ ನಲ್ಲಿ ಐಪಿಎಸ್ ಅಧಿಕಾರಿಗಳ ಮುಸುಕಿನ ಗುದ್ದಾಟಕ್ಕೆ ತಾರ್ಕಿಕ ಅಂತ್ಯ ಸಿಕ್ಕಿದ್ದು,ಶೀತಲ ಸಮರಕ್ಕೆ ಫುಲ್ ಸ್ಟಾಫ್ ನೀಡುವ ಹಿನ್ನೆಲೆಯಲ್ಲಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು.

ಈ ಹಿನ್ನೆಲೆ, ಲಾಬು ರಾಮ್ ಅವರನ್ನು ಹು-ಧಾ ಮಹಾನಗರ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದು, ಡಿಸಿಪಿಯಾಗಿದ್ದ ಕೃಷ್ಣಕಾಂತ ಅವರು ಧಾರವಾಡ ಜಿಲ್ಲಾ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದರು. ಅಲ್ಲದೇ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ಕೂಡ ಹೆಚ್ಚಿನ ಜವಾಬ್ದಾರಿ ನೀಡಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.