ETV Bharat / state

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆಯಿಲ್ಲ: ಪ್ರಹ್ಲಾದ್ ಜೋಶಿ

ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರು ಮತ್ತು ಹೈಕಮಾಂಡ್ ನಿರ್ಧರಿಸುತ್ತೆ. ಸಂಪುಟ ವಿಸ್ತರಣೆ ನನ್ನ ಬಳಿ ಯಾವುದೇ ಮಾಹಿತಿ ಇಲ್ಲ ಎಂದು ಪ್ರಹ್ಲಾದ್ ಜೋಶಿ ಹೇಳಿದರು.

Union Minister Pralhad Joshi
ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆಯಿಲ್ಲ
author img

By

Published : May 7, 2022, 9:50 PM IST

ಹುಬ್ಬಳ್ಳಿ: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆಯಿಲ್ಲ. 2023ರವರೆಗೂ ಬಸವರಾಜ ಬೊಮ್ಮಾಯಿ ಅವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ. ನಾಯಕತ್ವ ಬದಲಾವಣೆ ಬಗ್ಗೆ ಮಾಧ್ಯಮದವರೇ ಹೇಳುತ್ತಿದ್ದೀರಿ. ಆದರೆ, ಅದ್ಯಾವುದು ನಮ್ಮ ಪಕ್ಷದಲ್ಲಿಲ್ಲ. ಯಾರು ಉಹಾಪೋಹಗಳನ್ನು ನಂಬಬೇಡಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವತ್ತಿನ ನನ್ನ ಮತ್ತು ಸಿಎಂ ಭೇಟಿಯಲ್ಲಿ ವಿಶೇಷತೆ ಇಲ್ಲ. ಇಬ್ಬರು ಒಂದೇ ಪಕ್ಷದ ನಾಯಕರು ಸಾಮಾನ್ಯವಾಗಿ ಭೇಟಿ ಆಗುತ್ತಿರುತ್ತೇವೆ. ನಾನೇನು ಅವರನ್ನು ವಿಮಾನ ನಿಲ್ದಾಣಕ್ಕೆ ಕರೆಯಿಸಿಲ್ಲ. ಅವರೇ ಬಂದಿದ್ದಾರೆ. ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರು ಮತ್ತು ಹೈಕಮಾಂಡ್ ನಿರ್ಧರಿಸುತ್ತೆ. ಸಂಪುಟ ವಿಸ್ತರಣೆ ನನ್ನ ಬಳಿ ಯಾವುದೇ ಮಾಹಿತಿ ಇಲ್ಲ ಎಂದರು.

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆಯಿಲ್ಲ

ಸಿಎಂ ಸ್ಥಾನಕ್ಕಾಗಿ 2,500 ಕೋಟಿ ಕೇಳಿದ್ದಾರೆ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಜೋಶಿ, ಅದು ನಮ್ಮ ಪಕ್ಷದಲ್ಲಿಲ್ಲ, ಕಾಂಗ್ರೆಸ್​ನಲ್ಲಿ ಇದೆ ಎಂದು ಈಗಾಗಲೇ ಯತ್ನಾಳ್​ ಅವರೇ ಇಂದು ಸ್ಪಷ್ಟನೆ ನೀಡಿದ್ದಾರೆ ಎಂದಷ್ಟೇ ಹೇಳಿದರು.

ಪಿಎಸ್​ಐ ನೇಮಕಾತಿ ಹಗರಣ ಸಂಬಂಧ ಕಾಂಗ್ರೆಸ್​ನವರು ತನಿಖಾ ಸಂಸ್ಥೆಗಳಿಂದ ತನಿಖೆ ಬೇಡ, ನ್ಯಾಯಾಂಗ ತನಿಖೆ ಬೇಕು ಅಂತಿದ್ದಾರೆ. ನ್ಯಾಯಾಂಗ ತನಿಖೆಯಾದರೆ ಯಾರೂ ಜೈಲಿಗೆ ಹೋಗಲ್ಲ. ಸುಮ್ಮನೆ ಎಲ್ಲರೂ ಕಾಲಹರಣ ಮಾಡಿದಾರಾಯಿತು ಅಂತ‌ ಅನ್ಕೊಂಡಿದ್ದಾರೆ. ಪ್ರಿಯಾಂಕ್ ಖರ್ಗೆ ಮನೆಯಲ್ಲಿ ಬಂಧಿತ ಬ್ಲ್ಯಾಕ್ ಕಾಂಗ್ರೆಸ್ ಅಧ್ಯಕ್ಷ ಮತ್ತವರ ಸಹೋದರ ಇರ್ತಿದ್ದರು. ಈಗ ನೋಟಿಸ್ ನೀಡಿದರೂ ಪ್ರಿಯಾಂಕ್​ ಉತ್ತರಿಸುತ್ತಿಲ್ಲ. ಅವರ ಹತ್ತಿರ ಮಾಹಿತಿ ಇದ್ದರೆ, ಜಬಾಬ್ದಾರಿ ವ್ಯಕ್ತಿಯಾಗಿ ಆ ಮಾಹಿತಿ ತನಿಖಾಧಿಕಾರಿಗಳಿಗೆ ನೀಡುವುದು ಅವರ ಕರ್ತವ್ಯ ಎಂದರು.

ಇದನ್ನೂ ಓದಿ: ರಾಜಕಾರಣ ನಿಂತ ನೀರಲ್ಲ, ದಕ್ಷಿಣ ಕರ್ನಾಟಕ ನಮ್ಮ ಕಪಿಮುಷ್ಟಿಯಲ್ಲಿದೆ ಎಂದವರಿಗೆ ಮುಂದೆ ಜನರಿಂದ ಪಾಠ : ಸಿಎಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.