ಹುಬ್ಬಳ್ಳಿ: ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರು ಶಿಕ್ಷಣ ಹಾಗೂ ಸಮಾಜ ಸೇವೆಯಲ್ಲಿ 40 ವಸಂತಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ ಜೂನ್ 30ರಿಂದ ವರ್ಷವಿಡೀ ಅವರ ಸೇವೆಯನ್ನು ಸಮಾಜಕ್ಕೆ ಪರಿಚಯಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಲ್ಯಾಮಿಂಗ್ಟನ್ ಸ್ಕೂಲ್ ಮುಖ್ಯಸ್ಥ ಎಂ ಬಿ ನಾತು ಹೇಳಿದರು.
ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ ಹಾಗೂ ಬಸವರಾಜ ಹೊರಟ್ಟಿ ಹಿತೈಷಿಗಳ ಬಳಗದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ.
1980ರ ಜೂನ್ 30ರಂದು ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು. ಇದೇ ಜೂನ್ 30ಕ್ಕೆ ನಲವತ್ತು ವರ್ಷ ಪೂರ್ಣಗೊಳ್ಳಲಿದೆ ಎಂದರು.