ETV Bharat / state

ಬಿಜೆಪಿ ನಾಯಕರ ಮುಂದಿನ ನಡೆ ಏನಿರಬಹುದು? ಕುತೂಹಲಕ್ಕೆ ತೆರೆ ಎಳೆದ ಹೊರಟ್ಟಿ - Basavaraj Horatti

ಆಪರೇಷನ್​ ಕಮಲ ಮಾಡಿ ಬಿಜೆಪಿ ನಾಯಕರು ಸರ್ಕಾರ ರಚಿಸಲು ಪ್ರಯತ್ನಿಸುತ್ತಿಲ್ಲ. ಅವರ ಆಲೋಚನೆಗಳೇ ಬೇರೆ ಇವೆ ಎಂದು ಹಿರಿಯ ಜೆಡಿಎಸ್​ ಮುಖಂಡ ಬಸವರಾಜ್ ಹೊರಟ್ಟಿ ಬಿಜೆಪಿ ನಾಯಕರ ಮುಂದಿನ ನಡೆ ಏನಿರಬಹುದು ಅನ್ನೋದರ ಬಗ್ಗೆ ಮಾಹಿತಿ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿರುವ ವಿಧಾನ‌ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ
author img

By

Published : May 27, 2019, 4:45 PM IST

ಹುಬ್ಬಳ್ಳಿ: ಆಪರೇಷನ್​ ಕಮಲ ಮಾಡಿ ಬಿಜೆಪಿ ನಾಯಕರು ಸರ್ಕಾರ ರಚಿಸುತ್ತಾರೆ ಎನ್ನುವ ನಂಬಿಕೆ ನನಗಿಲ್ಲ. ನನಗೆ ಬಂದ ಮಾಹಿತಿ ಪ್ರಕಾರ, ಬಿಜೆಪಿಯವರು ಅತೃಪ್ತ ಶಾಸಕರಿಂದ ರಾಜೀನಾಮೆ ಕೊಡಿಸಿ ರಾಷ್ಟ್ರಪತಿ ಆಡಳಿತ ಹೇರಲು ಮುಂದಾಗಿದ್ದಾರೆ ಎಂದು ವಿಧಾನ‌ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಹೇಳಿದರು.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಹೋಗಲು ಬಿಜೆಪಿಯವರು ಸಿದ್ಧತೆ ನಡೆಸಿದ್ದಾರೆ. ಲೋಕಸಭೆಯಲ್ಲಿ ಸಿಕ್ಕ ಗೆಲುವಿನಿಂದ ವಿಧಾನಸಭೆ ಚುನಾವಣೆಗೆ ಹೋದರೆ 150 ಸ್ಥಾನಗಳನ್ನ ಸುಲಭವಾಗಿ ಗೆಲ್ಲಬಹುದು ಎನ್ನುವ ಲೆಕ್ಕಾಚಾರದಲ್ಲಿ ಬಿಜೆಪಿ ನಾಯಕರಿದ್ದಾರೆ. ಅವರಲ್ಲಿ ಎಲ್ಲರೂ ಮಂತ್ರಿ ಆಗಬೇಕು ಎನ್ನುವವರೇ ಇದ್ದಾರೆ. ಆದರೆ, ಇದು ಸಾಧ್ಯವಿಲ್ಲ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿರುವ ವಿಧಾನ‌ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ

ಜೆಡಿಎಸ್​ ಮತ್ತು ಕಾಂಗ್ರೆಸ್​​ನವರು ಒಗ್ಗಟ್ಟಿನಿಂದ ಸರ್ಕಾರ ನಡೆಸಿದರೆ ಒಳ್ಳೆಯದು, ಇಲ್ಲದಿದ್ದರೆ ಕಷ್ಟ ಅನುಭವಿಸಬೇಕಾಗುತ್ತದೆ. ಮೈತ್ರಿಯಲ್ಲಿ ಹೆಚ್ಚು-ಕಡಿಮೆ ಆಗಿದೆ. ಭಿನ್ನಾಭಿಪ್ರಾಯ ಮರೆತು ಎಲ್ಲರೂ ಒಗ್ಗಟ್ಟಾಗಿದ್ದಾರೆ. ಮೈತ್ರಿಯಲ್ಲಿ ಅಪಸ್ವರ ಬಾರದಂತೆ ನೋಡಿಕೊಳ್ಳಬೇಕು. ನಾನು ಸಹ ಮಂತ್ರಿಯಾಗಿಲ್ಲ, ನಾನು ಎಲ್ಲ ತ್ಯಾಗಕ್ಕೂ ಸಿದ್ಧ. ಸರ್ಕಾರ ಒಳ್ಳೆಯ ರೀತಿಯಲ್ಲಿ ನಡೆಯಬೇಕು. ಅದಕ್ಕಾಗಿ ಉಳಿದವರು ತ್ಯಾಗಕ್ಕೆ ಮುಂದಾಗಬೇಕು ಎಂದರು.

ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಸವಾಲಾಗಿ ಸ್ವೀಕರಿಸಿಕೊಂಡು ಗೊಂದಲಗಳನ್ನ ಬಗೆಹರಿಸಲಿ. ಕೆಲವು ಸಚಿವರು ರಾಜೀನಾಮೆಗೆ ಮುಂದಾಗಿರುವುದು ಒಳ್ಳೆಯ ಬೆಳವಣಿಗೆ. ಹೊಸಬರಿಗೆ ಅವಕಾಶ ಮಾಡಿಕೊಡಲಿ. ಇಂತಹ ಕ್ಲಿಷ್ಟಕರವಾದ ಸ್ಥಿತಿಯಲ್ಲಿ ಸರ್ಕಾರ ನಡೆಯಬೇಕಾದರೆ ಕೆಲವರು ತ್ಯಾಗ ಮಾಡಲೇಬೇಕು. ಇಲ್ಲದಿದ್ದರೆ ಕಷ್ಟ. ಈಗಲೂ ಕಾಲ ಮಿಂಚಿಲ್ಲ, ರಮೇಶ ಜಾರಕಿಹೊಳಿಯನ್ನ ಕರೆದು ಮಾತನಾಡಿ ಎಂದು‌ ಸಲಹೆ ನೀಡಿದರು.

sample description
ETV Bharat Logo

Copyright © 2025 Ushodaya Enterprises Pvt. Ltd., All Rights Reserved.