ETV Bharat / state

ನಾನು ಕಿಂಗ್ ಅಲ್ಲಾ,‌ ಕಿಂಗ್ ಮೇಕರ್: ಬಸವಜಯ ಮೃತ್ಯುಂಜಯ ಸ್ವಾಮೀಜಿ

author img

By

Published : Jul 27, 2022, 1:49 PM IST

ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ವಿಚಾರ - ಜುಲೈ 30ರಂದು ಹುಬ್ಬಳ್ಳಿಯಲ್ಲಿ ಪಂಚಮಸಾಲಿ ಸಮಾಜದಿಂದ ಬೃಹತ್​ ಪ್ರತಿಭಟನೆ- ಬಸವಜಯ​ ಮೃತ್ಯುಂಜಯ ಸ್ವಾಮೀಜಿ

Kn_hbl_02_kudalasangam_swamy_avb_7208089
ಬಸವಜಯ ಮೃತ್ಯುಂಜಯ ಸ್ವಾಮೀಜಿ

ಹುಬ್ಬಳ್ಳಿ: ನಾನು ಯಾವುದೇ ಕಾರಣಕ್ಕೂ ರಾಜಕಾರಣ ಮಾಡುವುದಿಲ್ಲ. ನಾನು ಕಿಂಗ್ ಮೇಕರ್ ಹೊರತು, ಕಿಂಗ್ ಆಗಲು ಇಷ್ಟಪಡುವುದಿಲ್ಲ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮ ಗುರುಗಳಾದವರು ಎಲ್ಲರಿಗೂ ಆಶೀರ್ವಾದ ಮಾಡಬೇಕು. ರಾಜಕಾರಣ ಮಾಡುವುದು ಸರಿಯಲ್ಲ. ಹಾಗಾಗಿ ರಾಜಕಾರಣಕ್ಕೆ ಇಳಿಯುವುದಿಲ್ಲ ಎಂದು ಸ್ವಾಮೀಜಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು.

ಪ್ರತಿಭಟನೆ ಕುರಿತು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿಕೆ

ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಡುವ ವಿಷಯಕ್ಕೆ ಸಂಬಂಧಿಸಿದಂತೆ‌ ಮುಖ್ಯಮಂತ್ರಿಗಳು ಈ ಹಿಂದೆ ಮಾತು ಕೊಟ್ಟಿದ್ದರು. ಆದರೇ ಇದುವರೆಗೂ ಕೊಟ್ಟಮಾತಿನ ಹಾಗೇ ನಡೆದುಕೊಂಡಿಲ್ಲ. ಅಗಸ್ಟ್ 22 ರೊಳಗೆ ಸಮಾಜಕ್ಕೆ ಮೀಸಲಾತಿ ಕೊಡುವ ಭರವಸೆ ನೀಡಿದ್ದಾರೆ. ಇದನ್ನು ನೆನಪಿಸಲು ಜುಲೈ 30 ರಂದು ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಅಂದು ಸಚಿವ ಬಸನಗೌಡ ಪಾಟೀಲ್​ ಯತ್ನಾಳ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಪ್ರತಿಭಟನೆಗೆ 10 ಸಾವಿರಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ ಇದೆ ಎಂದರು.

ಇದನ್ನೂ ಓದಿ:ಮಾಧ್ಯಮಗಳು ಪ್ರಾಮಾಣಿಕ ವರದಿಗಾರಿಕೆಗೆ ಸೀಮಿತವಾಗಲಿ: ಸಿಜೆಐ ರಮಣ ಕಿವಿಮಾತು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.