ಹುಬ್ಬಳ್ಳಿ: ಪತ್ರಕರ್ತರ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ ಮುಗಿಸಿಕೊಂಡು ಹೋಗುತ್ತಿದ್ದಾಗ ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿಯವರ ಕಾರು ಎದುರಿಗೆ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ಘಟನೆ ಬಿವಿಬಿ ಕ್ಯಾಂಪಸ್ನಲ್ಲಿ ನಡೆದಿದೆ.
ಸವದತ್ತಿ ಮೂಲದ ಕೆಂಚಪ್ಪ ಎಂಬಾತ ಗಾಯಗೊಂಡ ಬೈಕ್ ಸವಾರ. ಅಪಘಾತದಲ್ಲಿ ವಾಹನ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಅರ್ಧ ಗಂಟೆಯಾದರೂ ಘಟನಾ ಸ್ಥಳಕ್ಕೆ ಆ್ಯಂಬುಲೆನ್ಸ್ ಬಂದಿರಲಿಲ್ಲ. ಘಟನೆ ನಡೆದ 10 ನಿಮಿಷ ಹೊರಟ್ಟಿ ಸ್ಥಳದಲ್ಲಿದ್ದು, ನಂತರ ಅಲ್ಲಿಂದ ಬೇರೆ ವಾಹನ ತರಿಸಿ ಹೊರಟಿದ್ದಾರೆ. ಗಾಯಾಳುವನ್ನು ಕಿಮ್ಸ್ ಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ: ವಿದ್ಯುತ್ ಟವರ್ ಏರಿ ವ್ಯಕ್ತಿ ಆತ್ಮಹತ್ಯೆ ಯತ್ನ: ಸ್ಥಳೀಯರು ಹೆಸ್ಕಾಂ ಅಧಿಕಾರಿ ಸಮಯ ಪ್ರಜ್ಞೆಯಿಂದ ಉಳಿದ ಜೀವ