ETV Bharat / state

ಬಸವೇಶ್ವರ ಪುತ್ಥಳಿ ತೆರವು: ಫ್ಲೈಓವರ್ ನಿರ್ಮಾಣಕ್ಕೆ ರಾತ್ರೋರಾತ್ರಿ ಕಾರ್ಯಾಚರಣೆ

author img

By

Published : Jan 31, 2023, 9:59 AM IST

ಹುಬ್ಬಳ್ಳಿಯಲ್ಲಿ ಫ್ಲೈಓವರ್ ಕಾಮಗಾರಿ ನಡೆಯುತ್ತಿದೆ. ಇದಕ್ಕಾಗಿ ಕಳೆದ ರಾತ್ರಿ ಬಸವಣ್ಣನ ಪುತ್ಥಳಿ ತೆರವು ಕಾರ್ಯ ನಡೆಯಿತು.

Etv basaveshwara-statue-cleared-for-construction-of-flyover-in-hubli
Etv Bharatಬಸವೇಶ್ವರ ಪುತ್ಥಳಿ ತೆರವು: ಪ್ಲೈಓವರ್ ನಿರ್ಮಾಣಕ್ಕೆ ರಾತ್ರೋರಾತ್ರಿ ಕಾರ್ಯಾಚರಣೆ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಮಹತ್ವದ ಯೋಜನೆಯಲ್ಲಿ ಒಂದಾಗಿರುವ ಫ್ಲೈಓವರ್ ನಿರ್ಮಾಣ ಕಾಮಗಾರಿಗೆ ಬಸವ ವನದಲ್ಲಿರುವ ಬಸವೇಶ್ವರರ ಪುತ್ಥಳಿಯನ್ನು ಕಳೆದ ರಾತ್ರಿ ತೆರವು ಮಾಡಲಾಯಿತು. ಇದಕ್ಕಾಗಿ ಸಾಕಷ್ಟು ಬಾರಿ ಸಭೆ ನಡೆಸಿ ಅಂತಿಮ‌ ತೀರ್ಮಾನಕ್ಕೆ ಬಂದಿದ್ದು ತಾಂತ್ರಿಕ ಉಪಕರಣಗಳ ಮೂಲಕ ತೆರವು ಕಾರ್ಯ ನಡೆಯಿತು. ಫ್ಲೈಓವರ್ ಕೆಲಸ ಪೂರ್ಣಗೊಂಡ ನಂತರ ಮತ್ತೆ ಮೂರ್ತಿಯನ್ನು ಮರು ಸ್ಥಾಪಿಸುವ ಭರವಸೆಯನ್ನು ಜನಪ್ರತಿನಿಧಿಗಳು ನೀಡಿದ್ದಾರೆ. ಸಂಘಟನೆಗಳು ಕೂಡ ಪುತ್ಥಳಿ ತೆರವಿಗೆ ಒಪ್ಪಿಗೆ ನೀಡಿದ್ದವು. ಹುಬ್ಬಳ್ಳಿಯ ಕೇಂದ್ರಿಯ ಬಸ್ ನಿಲ್ದಾಣದ ಹತ್ತಿರ ಫ್ಲೈಓವರ್ ಕಾಮಗಾರಿ ಪ್ರಗತಿಯಲ್ಲಿದೆ.

ಈ ಹಿಂದೆ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಸ್ಥಳಕ್ಕೆ ಭೇಟಿ ನೀಡಿ ಬಸವಣ್ಣನ ಪುತ್ಥಳಿ ತೆರವು ಕುರಿತು ವಿವಿಧ ಸಂಘಟನೆ ಮತ್ತು ನಾಗರೀಕರ ಜೊತೆ ಸಮಾಲೋಚನೆ ನಡೆಸಿದ್ದರು. ಇದಾದ ಬಳಿಕ ಎಲ್ಲರ ಒಪ್ಪಿಗೆಯ ಮೇರೆಗೆ ನಗರದ ಹೃದಯ ಭಾಗದಲ್ಲಿರುವ ಬಸವ ವನದಲ್ಲಿರುವ ಪುತ್ಥಳಿ ಸ್ಥಳಾಂತರಕ್ಕೆ ಸಿದ್ಧತೆ ನಡೆಸಲಾಗಿತ್ತು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಶೆಟ್ಟರ್​, "ನಗರದ ಫ್ಲೈಓವರ್ ಕಾಮಗಾರಿ ಆರಂಭಗೊಂಡಿದೆ. ಯೋಜನೆ ಪ್ರಕಾರ ಬಸವ ವನದ ಹತ್ತಿರದ ಫ್ಲೈಓವರ್, ಮೂರ್ತಿಗೆ ಹೊಂದಿಕೊಂಡು ಬರುವ ಕಾರಣ ಪುತ್ಥಳಿ ಸ್ಥಳಾಂತರ ಮಾಡುವುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಸ್ಥಳ ಪರಿಶೀಲನೆ ಮಾಡಿ ಸ್ಥಳೀಯರ ಹಾಗೂ ಸಂಘಟನೆಗಳ ಸಹಕಾರದೊಂದಿಗೆ ಮೂರ್ತಿಯನ್ನು ಸ್ಥಳಾಂತರ ಮಾಡಲಾಗುತ್ತದೆ. ಈಗಾಗಲೇ ಸಾರ್ವಜನಿಕರ ಅಭಿಪ್ರಾಯ ಹಾಗೂ ಸಮಾಜದವರ ಸಲಹೆ ಮೇರೆಗೆ ಸೂಚಿಸಿದ ಸ್ಥಳದಲ್ಲಿ ಸ್ಥಾಪಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಮೂರ್ತಿಗೆ ಯಾವುದೇ ರೀತಿಯ ಧಕ್ಕೆಯಾಗದಂತೆ ಸೂಕ್ತ ತಂತ್ರಜ್ಞಾನದ ಮೂಲಕ ಸ್ಥಳಾಂತರ ಕಾರ್ಯ ಮಾಡಲಾಗುತ್ತದೆ" ಎಂದು ಭರವಸೆ ನೀಡಿದ್ದರು.

ಚೆನ್ನಮ್ಮ ವೃತ್ತದ ಮೂಲಕ ಹಾದುಹೋಗುವ ಪ್ಲೈ ಓವರ್ ಸುಮಾರು 3.6 ಕಿಲೊಮೀಟರ್ ಉದ್ದವಿದೆ. ಚನ್ನಮ್ಮ ವೃತ್ತದಿಂದ ಬಾಗಲಕೋಟೆ ರಸ್ತೆಯ ದೇಸಾಯಿ ವೃತ್ತದವರೆಗೆ, ಧಾರವಾಡ ರಸ್ತೆಯ ಹೊಸೂರವರೆಗೆ, ಗದಗ ರಸ್ತೆಯಲ್ಲಿ ಅಂಬೇಡ್ಕರ್ ವೃತ್ತದವರೆಗೆ ಒಟ್ಟು 3.6 ಕಿ.ಮೀ ನಾಲ್ಕು ಪಥದ ಫ್ಲೈಓವರ್ ನಿರ್ಮಾಣವಾಗಲಿದೆ. ಈ ಮೂರು ಹಂತದ ಯೋಜನೆಗೆ ಸುಮಾರು 1,242 ಕೋಟಿ ವೆಚ್ಚದ ಡಿಪಿಆರ್ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಕೇಂದ್ರ ಸರ್ಕಾರದ ಸೂಚನೆಯ ಹಿನ್ನೆಲೆಯಲ್ಲಿ ಮೂರು ಹಂತಗಳಾಗಿ ವಿಂಗಡಿಸಿ ಮೊದಲ ಹಂತದ ಕಾಮಗಾರಿಗೆ ಚಾಲನೆ ನೀಡಲಾಗಿತ್ತು.

ಇದನ್ನೂ ಓದಿ : ಹುಬ್ಬಳ್ಳಿಯ ಪ್ಲೈಓವರ್ ನಿರ್ಮಾಣಕ್ಕೆ ವಿಘ್ನ: ಉಪಯೋಗವಿಲ್ಲದ ಯೋಜನೆ ಯಾಕೆ..?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.