ETV Bharat / state

ತಮ್ಮ ಚರ್ಮ ರಕ್ಷಣೆಗೋಸ್ಕರ ಕಾಂಗ್ರೆಸ್​​ ಹೀಗೆಲ್ಲಾ ಹೇಳುತ್ತಿದೆ : ಬಿ.ಸಿ ಪಾಟೀಲ್ - Dharwad news]

ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಬಾರದು..

BC Patil talks on Vinay Kulakarni Arrest
ಕೃಷಿ ಸಚಿವ ಬಿ.ಸಿ ಪಾಟೀಲ್​​​
author img

By

Published : Nov 11, 2020, 12:36 PM IST

ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನದ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ, ಸಿಬಿಐ ಸಾಂವಿಧಾನಿಕ ಸಂಸ್ಥೆಯಾಗಿದೆ. ಹೀಗಾಗಿ, ನಿಷ್ಪಕ್ಷಪಾತ ತನಿಖೆ ಮಾಡುತ್ತಿದೆ. ಅವರನ್ನು ತನಿಖೆ ಮಾಡಲು ಸುಮ್ಮನೆ ಬಿಡಬೇಕು. ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಬಾರದು ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್​​​ ತಿಳಿಸಿದರು.

ವಿನಯ್ ಕುಲಕರ್ಣಿ ಬಂಧನ ಕುರಿತು ಬಿಸಿ ಪಾಟೀಲ್ ಪ್ರತಿಕ್ರಿಯೆ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆ ಫಲಿತಾಂಶದ ಕುರಿತು ಮಾತನಾಡಿ, ಉಪ ಚುನಾವಣೆಯಲ್ಲಿ ಜಾತಿ ರಾಜಕಾರಣ ಮಾಡಿದ ಅವರಿಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ.‌

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜಾತಿ ರಾಜಕಾರಣ ನಡೆಯುವುದಿಲ್ಲ. ಅಭಿವೃದ್ಧಿ ಪರ ಕೆಲಸ ಮಾಡುವವರನ್ನು ಮತದಾರರು ಬೆಂಬಲಿಸುತ್ತಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಅದೇ ರೀತಿ ಆರ್​​ಆರ್ ನಗರ ಹಾಗೂ ಶಿರಾದಲ್ಲಿ ಮತದಾರರು ಸರ್ಕಾರಕ್ಕೆ ಆಶೀರ್ವಾದ ಮಾಡಿದ್ದಾರೆ. ಅಲ್ಲಿನ ಜನತೆಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.