ETV Bharat / state

ಯುವಕನ ವಿವಸ್ತ್ರಗೊಳಿಸಿ ಹಲ್ಲೆ ಕೇಸ್: ಬೆಂಡಿಗೇರಿ ಇನ್​ಸ್ಪೆಕ್ಟರ್, ಹುಬ್ಬಳ್ಳಿ ಮಹಿಳಾ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್ ವರ್ಗಾವಣೆ - ಬೆಂಡಿಗೇರಿ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್

ಬೆಂಡಿಗೇರಿ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್ ಮಹಿಳಾ ಪೊಲೀಸ್ ಠಾಣೆಗೆ ನಿಯೋಜನೆ ಮಾಡಿ ಮತ್ತು ಮಹಿಳಾ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್ ಜಯಪಾಲ್ ಪಾಟೀಲ್ ಅವರನ್ನು ಬೆಂಡಿಗೇರಿ ಪೊಲೀಸ್ ಠಾಣೆಗೆ ನಿಯೋಜನೆ ಮಾಡಿ ಹು-ಧಾ ಪೊಲೀಸ್ ಆಯುಕ್ತ ಸಂತೋಷ ಬಾಬು ಆದೇಶಿಸಿದ್ದಾರೆ.

bendigeri-inspector-hubli-women-police-station-inspector-temporary-transfer
ಬೆಂಡಿಗೇರಿ ಇನ್​ಸ್ಪೆಕ್ಟರ್, ಹುಬ್ಬಳ್ಳಿ ಮಹಿಳಾ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್ ತಾತ್ಕಾಲಿಕ ವರ್ಗಾವಣೆ
author img

By

Published : Jul 13, 2023, 1:28 PM IST

ಹುಬ್ಬಳ್ಳಿ : ಬೆಂಡಿಗೇರಿ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್ ಅವರನ್ನು ಮಹಿಳಾ ಪೊಲೀಸ್ ಠಾಣೆಗೆ ನಿಯೋಜನೆ ಮಾಡಿ ಹು-ಧಾ ಪೊಲೀಸ್ ಆಯುಕ್ತ ಸಂತೋಷ ಬಾಬು ಆದೇಶಿಸಿದ್ದಾರೆ. ಇನ್ಸ್ಪೆಕ್ಟರ್ ಬಿ.ಟಿ. ಬುಡ್ನಿ ಅವರನ್ನು ಬೆಂಡಿಗೇರಿ ಪೊಲೀಸ್ ಠಾಣೆಯಿಂದ ಮಹಿಳಾ ಪೊಲೀಸ್ ಠಾಣೆಗೆ ನಿಯೋಜನೆ ಮಾಡಲಾಗಿದೆ. ಮಹಿಳಾ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್ ಜಯಪಾಲ್ ಪಾಟೀಲ್ ಅವರನ್ನು ಬೆಂಡಿಗೇರಿ ಪೊಲೀಸ್ ಠಾಣೆಗೆ ನಿಯೋಜಿಸಲಾಗಿದೆ.

ಇನ್​ಸ್ಟಾಗ್ರಾಂ ವಿಚಾರಕ್ಕೆ ಯುವಕನ ಬೆತ್ತಲೆ ಮಾಡಿ ಹಲ್ಲೆ ನಡೆಸಿದ ಪ್ರಕರಣದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಕಳೆದ ಐದು ತಿಂಗಳ ಹಿಂದೆ ಕ್ಷುಲ್ಲಕ ಕಾರಣಕ್ಕೆ ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ್ದ ಅಮಾನವೀಯ ಘಟನೆ ಹುಬ್ಬಳ್ಳಿಯಲ್ಲಿ ನಡೆದಿತ್ತು. ಘಟನೆ ತಡವಾಗಿ ಬೆಳಕಿಗೆ ಬಂದಿತ್ತು. ಈ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ್ದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಸಂತೋಷ್ ಬಾಬು, ಯುವಕನನ್ನು ಬೆತ್ತಲೆ ಮಾಡಿ ಥಳಿಸಿರುವ ಎರಡು ವಿಡಿಯೋಗಳು ನಮ್ಮ ಗಮನಕ್ಕೆ ಬಂದಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್, ವಿನಾಯಕ್, ಗಣೇಶ್, ಸಚಿನ್, ಮಂಜುನಾಥ್​ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಹೇಳಿದ್ದರು.

ಘಟನೆಯ ಹಿನ್ನಲೆ : ಇನ್​ಸ್ಟಾಗ್ರಾಮ್​ನಲ್ಲಿ ಸಂತ್ರಸ್ತ ಸಂದೀಪ್, ಪ್ರಜ್ವಲ್ ತಾಯಿಗೆ ಕೆಟ್ಟದಾಗಿ ಬೈದಿದ್ದ. ಆರೋಪಿತರು ಸಂದೀಪ್​ಗೆ ಥಳಿಸಿದ್ದರು. ಈ ಬಗ್ಗೆ ಇದುವರೆಗೂ ಸಂದೀಪ್ ದೂರು ಕೊಟ್ಟಿಲ್ಲ. ಯಾರ ಸಂಪರ್ಕದಲ್ಲೂ ಸಹ ಇಲ್ಲ. ಮೂರು ನಾಲ್ಕು ತಿಂಗಳ ಹಿಂದೆ ಹುಬ್ಬಳ್ಳಿಯ ಸೆಟ್ಲಮೆಂಟ್​ನಲ್ಲಿ ನಡೆದ ಘಟನೆ. ಆದರೆ, ಸ್ಥಳ ಯಾವುದು ಎಂದು ಖಚಿತವಾಗಿಲ್ಲ. ಪೊಲೀಸರು ಈ ತರಹದ ಘಟನೆ ಆಗೋ ಮುಂಚೆ ಎಚ್ಚೆತ್ತುಕೊಳ್ಳಬೇಕಿತ್ತು. ಸಂದೀಪ್‍ಗಾಗಿ ಹುಡುಕಾಟ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಯುವಕನನ್ನು ನಗ್ನಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ಐವರ ಬಂಧನ: ಪೊಲೀಸ್​ ಕಮಿಷನರ್ ಸಂತೋಷ ಬಾಬು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.