ETV Bharat / state

ಬೆಂಗಳೂರು - ಧಾರವಾಡ ವಂದೇ ಭಾರತ್ ರೈಲು ಸೇವೆಗೆ ಜನರಿಂದ ಉತ್ತಮ ಸ್ಪಂದನೆ.. - ಜನರಿಂದ ಉತ್ತಮ ಪ್ರತಿಕ್ರಿಯೆ

ಬೆಂಗಳೂರು- ಧಾರವಾಡ ವಂದೇ ಭಾರತ್ ರೈಲು ಸೇವೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

Vande Bharat train service
ಬೆಂಗಳೂರು- ಧಾರವಾಡ ವಂದೇ ಭಾರತ್ ರೈಲು ಸೇವೆಗೆ ಜನರಿಂದ ಉತ್ತಮ ಸ್ಪಂದನೆ..
author img

By

Published : Jul 21, 2023, 4:07 PM IST

ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನೀಶ್ ಹೆಗಡೆ ಪ್ರತಿಕ್ರಿಯೆ ನೀಡಿದರು.

ಹುಬ್ಬಳ್ಳಿ: ಬೆಂಗಳೂರು- ಧಾರವಾಡ ಮಧ್ಯೆ ಕಡಿಮೆ ಸಮಯದಲ್ಲಿ ಪ್ರಯಾಣ ಬೆಳೆಸಲು, ವಂದೇ ಭಾರತ್ ರೈಲು ಈಗಾಗಲೇ ಆರಂಭವಾಗಿದೆ. ಈ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 28 ರಂದು ಚಾಲನೆ ನೀಡಿದ್ದರು. ಕರ್ನಾಟಕದ 2ನೇ ವಂದೇ ಭಾರತ್ ರೈಲು ಸೇವೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಶೇ 85ರಷ್ಟು ಸೀಟುಗಳು ಭರ್ತಿ: ಬೆಂಗಳೂರು- ಧಾರವಾಡ ವಯಾ ಹುಬ್ಬಳ್ಳಿ ನಡುವೆ ಒಂದೇ ಬಾರಿ ಈ ರೈಲು ಸಂಚಾರ ನಡೆಸುತ್ತಿದ್ದು, ಶೇ 85 ರಷ್ಟು ಸೀಟುಗಳು ಭರ್ತಿಯಾಗುತ್ತಿವೆ. ಈ ರೈಲು 8 ಬೋಗಿಗಳನ್ನು ಹೊಂದಿದೆ. ರಾಜಧಾನಿ ಬೆಂಗಳೂರು ಮತ್ತು ಉತ್ತರ ಕರ್ನಾಟಕ ಸಂಪರ್ಕಿಸುವ ವಂದೇ ಭಾರತ್ ರೈಲು, ಯಶವಂತಪುರ, ದಾವಣಗೆರೆ ಮತ್ತು ಹುಬ್ಬಳ್ಳಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ. ಅತೀ ಹೆಚ್ವು ಜನರು ಕೂಡ ವಂದೇ ಭಾರತ್ ರೈಲನ್ನು ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ.

ಇನ್ನು ವಂದೇ ಭಾರತ್ ರೈಲಿನ ದರ ಹೆಚ್ಚಾಗಿದ್ದು, ಬೆಂಗಳೂರು - ಧಾರವಾಡ ವಯಾ ಹುಬ್ಬಳ್ಳಿ ಚೇರ್‌ ಕಾರ್ ಪ್ರಯಾಣ ದರ 1,185 ರೂಪಾಯಿ, ಮತ್ತು ಎಕ್ಸಿಕ್ಯುಟಿವ್ ಕಾರ್‌ ಸೀಟ್ ದರ 2,265 ರೂಪಾಯಿ, ಧಾರವಾಡ - ಕೆಎಸ್ಆರ್ ಬೆಂಗಳೂರು ನಡುವೆ ಚೇರ್‌ ಕಾರ್ ದರ 1,350 ರೂಪಾಯಿ ಮತ್ತು ಎಕ್ಸಿಕ್ಯುಟಿವ್ ಚೇರ್‌ ಕಾರ್‌ ದರ 2,460 ರೂಪಾಯಿ ಇದೆ. ಈ ರೈಲು ಬೆಲೆ ಇಳಿಸಬೇಕು, ಜೊತೆಗೆ ಇನ್ನೊಂದು ರೈಲು ಸೇವೆ ನೀಡಬೇೆಕು ಎಂದು ಹುಬ್ಬಳ್ಳಿ- ಧಾರವಾಡ ಜನರು ಒತ್ತಾಯಿಸಿದರು. ಜೊತೆಗೆ ಬಳ್ಳಾರಿ ಜನರು ಕೂಡ ನಮಗೂ ಬೆಂಗಳೂರು - ಬಳ್ಳಾರಿ ವಂದೇ ಭಾರತ್ ರೈಲು ಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.

ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಾಹಿತಿ: ಈ ಕುರಿತು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನೀಶ್ ಹೆಗಡೆ ಪ್ರತಿಕ್ರಿಯೆ ನೀಡಿದರು. ''ಬೆಂಗಳೂರು- ಧಾರವಾಡ ವಂದೇ ಭಾರತ್ ರೈಲು ಆರಂಭವಾಗಿರುವುದಕ್ಕೆ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ದರ ಹೆಚ್ಚಾಗಿದ್ದರೂ ಕೂಡ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಿದೆ. ವಂದೇ ಭಾರತ್ ರೈಲಿಗೆ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದ್ದು, ಹೆಚ್ಚಿನ ಜನರು ಈ ವಂದೇ ಭಾರತ್​ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ಇನ್ನೂ ಹೆಚ್ಚಿನ ರೈಲು ಸೇವೆ ಒದಗಿಸುವಂತೆ ಜನರು ಬೇಡಿಕೆ ಇಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಹೊಸ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ'' ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ನೈರುತ್ಯ ರೈಲ್ವೆ ಮತ್ತೊಂದು ಮಹತ್ವದ ಹೆಜ್ಜೆ.. ರೈಲ್ವೆ ನಿಲ್ದಾಣದಲ್ಲಿ ಕಡಿಮೆ ದರದಲ್ಲಿ ಪ್ರಯಾಣಿಕರಿಗೆ ಆಹಾರ ಪದಾರ್ಥ ವಿತರಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.