ETV Bharat / state

ನೆರೆ ಪರಿಹಾರ ಹಣ ದುರುಪಯೋಗ ಆಗದಿರಲಿ: ವಂದಿತಾ ಶರ್ಮಾ ಸೂಚನೆ - ನೆರೆ ಕಾಮಗಾರಿಗಳ ಕುರಿತಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳ ಸಭೆ

ರಾಜ್ಯ ಸರ್ಕಾರದಿಂದ ನೆರೆ ಪರಿಹಾರ ಕಾಮಗಾರಿಗಳಿಗೆ ಹೆಚ್ಚಿನ ಹಣ ಬಿಡುಗಡೆಯಾಗಿದ್ದು, ಈ ಹಣದ ದುರುಪಯೋಗವಾಗದಂತೆ ಎಚ್ಚರ ವಹಿಸಿ ಎಂದು ಆಯುಕ್ತೆ ವಂದಿತಾ ಶರ್ಮಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Vandita Sharma
ಅಧಿಕಾರಿಗಳಿಗೆ ಸೂಚನೆ ನೀಡಿದ ವಂದಿತಾ ಶರ್ಮಾ
author img

By

Published : Dec 20, 2019, 1:56 AM IST

ಹುಬ್ಬಳ್ಳಿ: ರಾಜ್ಯ ಸರ್ಕಾರದಿಂದ ನೆರೆ ಪರಿಹಾರ ಕಾಮಗಾರಿಗಳಿಗೆ ಹೆಚ್ಚಿನ ಹಣ ಬಿಡುಗಡೆ ಮಾಡಲಾಗಿದೆ. ಇದರ ದುರುಪಯೋಗವಾಗದಂತೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ ಸೂಚನೆ ನೀಡಿದ್ದಾರೆ.

ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ನೆರೆ ಕಾಮಗಾರಿಗಳ ಕುರಿತಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಸರ್ಕಾರದಿಂದ ನೆರೆಯಲ್ಲಿ ಸೂರು ಕಳೆದುಕೊಂಡವರಿಗೆ 5 ಲಕ್ಷ ರೂಪಾಯಿಗಳ ಪರಿಹಾರ ನೀಡಲಾಗುತ್ತಿದೆ. ಇದು ಅತಿ ಹೆಚ್ಚಿನ ಮೊತ್ತವಾಗಿದ್ದು, ಈಗಾಗಲೇ ಮೊದಲ ಕಂತಿನ ಹಣ ಪಡೆದವರು ಮನೆ ನಿರ್ಮಾಣ ಕಾರ್ಯ ಪ್ರಾರಂಭಿಸಿರುವುದನ್ನು ಖಾತ್ರಿ ಪಡಿಸಿಕೊಳ್ಳಿ ಎಂದು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮನೆ ಪುನರ್​​ ನಿರ್ಮಾಣ ಕಾರ್ಯದ ಪರಿಶೀಲನೆ:

ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಧಾರವಾಡ ಜಿಲ್ಲೆಯ ಅಳ್ನಾವರ, ಮುಗದ, ಕೆಲಗೇರಿ, ನವಲೂರು, ಹುಬ್ಬಳ್ಳಿ ನಗರದ ಗಾಮನಗಟ್ಟಿ, ಅಮರಗೋಳ, ತಾಜನಗರ ಸೇರಿದಂತೆ ಇತರೆ ಪ್ರದೇಶಗಳಿಗೆ ತಾವೆ ಖುದ್ದಾಗಿ ಭೇಟಿ ನೀಡಿ ಅಂಗನವಾಡಿ ಹಾಗೂ ಮನೆ ಪುನರ್​ ನಿರ್ಮಾಣ ಕಾರ್ಯ ಚಟುವಟಿಕೆಗಳನ್ನು ವೀಕ್ಷಿಸಿದರು.

Intro:ಹುಬ್ಬಳ್ಳಿ -04
ರಾಜ್ಯ ಸರ್ಕಾರದಿಂದ ನೆರೆ ಪರಿಹಾರ ಕಾಮಗಾರಿಗಳಿಗೆ ಹೆಚ್ಚಿನ ಹಣ ಬಿಡುಗಡೆ ಮಾಡಲಾಗಿದೆ. ಇದರ ದುರುಪಯೋಗವಾಗದಂತೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ ಹೇಳಿದರು.

ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ನೆರೆ ಕಾಮಗಾರಿಗಳ ಕುರಿತಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.
ಸರ್ಕಾರದಿಂದ ನೆರೆಯಲ್ಲಿ ಸೂರು ಕಳೆದುಕೊಂಡವರಿಗೆ 5 ಲಕ್ಷ ರೂಪಾಯಿಗಳ ಪರಿಹಾರ ನೀಡಲಾಗುತ್ತಿದೆ. ಇದು ಅತಿ ಹೆಚ್ಚಿನ ಮೊತ್ತವಾಗಿದೆ. ಈಗಾಗಲೇ ಮೊದಲ ಕಂತಿ ಹಣ ಪಡೆದವರು ಮನೆ ನಿರ್ಮಾಣ ಕಾರ್ಯ ಪ್ರಾರಂಭಿಸಿರುವುದನ್ನು ಖಾತ್ರಿ ಪಡಿಸಿಕೊಳ್ಳಿ. ನೋಡಲ್ ಅಧಿಕಾರಿಗಳನ್ನು ನೇಮಿಸಿ ಸ್ಥಳ ಪರಿಶೀಲನೆ ನಡೆಸಿ. ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ಯ ಇಂಜಿನಿಯರಿಂಗ್ ಇಲಾಖೆ, ಮಹಾನಗರ ಪಾಲಿಕೆ ವತಿಯಿಂದ ರಸ್ತೆಗಳನ್ನು ನಿರ್ಮಿಸಲಾಗುತ್ತಿದೆ. ಎಲ್ಲಿಯೂ ಒಂದು ಕಾಮಗಾರಿಗೆ ಎರೆಡು ಕಡೆ ಅನುದಾನ ಪಡೆಯುವಂತಾಗಬಾರದು. ಅಂಗನವಾಡಿ, ಶಾಲೆ, ರಸ್ತೆ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಿ, ಪರಿಹಾರ ಧನವನ್ನು ಬಾಕಿ ಉಳಿಸಿಕೊಳ್ಳದೆ ಸಂತ್ರಸ್ತರಿಗೆ ನೀಡಿ ಎಂದು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಖ್ಯಮಂತ್ರಿಗಳು ನೆರೆ ಕಾಮಗಾರಿಗಳ ಕುರಿತು ವಿವರವಾಗಿ ಸಭೆಗಳನ್ನು ನೆಡೆಸುತ್ತಿದ್ದಾರೆ. ಧಾರವಾಡ ಜಿಲ್ಲೆಯ ಕಾಮಗಾರಿ ಪ್ರಗತಿ ಕುರಿತು ಸರಿಯಾದ ಅಂಕಿಅಂಶಗಳನ್ನು ನೀಡುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ಸಭೆಯಲ್ಲಿ ಉಪ ವಿಭಾಗಾಧಿಕಾರಿ ಮಹಮದ್ ಜುಬೇರ್, ಹುಬ್ಬಳ್ಳಿ ಧಾರವಾಡ ಪಾಲಿಕೆ ಆಯುಕ್ತ ಸುರೇಶ್ ಇಟ್ನಾಳ್, ಲೋಕೋಪಯೋಗಿ ಇಲಾಖೆ ಕಾರ್ಯನಿವಾಹಕ ಇಂಜಿನಿಯರ್ ವಿರುಪಾಕ್ಷಪ್ಪ ಯಮಕನಮರಡಿ, ಹುಬ್ಬಳ್ಳಿ ತಹಶೀಲದಾರ ಶಶಿಧರ ಮಾಡ್ಯಾಳ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

*ಮನೆ ಪುರ್ನ ನಿರ್ಮಾಣ ಕಾರ್ಯದ ಪರಿಶೀಲನೆ*

ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ ಅವರು ಧಾರವಾಡ ಜಿಲ್ಲೆಯ ಅಳ್ನಾವರ, ಮುಗದ, ಕೆಲಗೇರಿ, ನವಲೂರು, ಹುಬ್ಬಳ್ಳಿ ನಗರದ ಗಾಮನಗಟ್ಟಿ, ಅಮರಗೋಳ, ತಾಜನಗರ ಸೇರಿದಂತೆ ಇತರೆ ಪ್ರದೇಶಗಳಿಗೆ ಭೇಟಿ ನೀಡಿ ಅಂಗನವಾಡಿ ಹಾಗೂ ಮನೆ ಪುರ್ನ ನಿರ್ಮಾಣ ಕಾರ್ಯ ಚಟುವಟಿಕೆಗಳನ್ನು ವೀಕ್ಷಿಸಿದರು.Body:H B GaddadConclusion:Etv hubli
ETV Bharat Logo

Copyright © 2025 Ushodaya Enterprises Pvt. Ltd., All Rights Reserved.