ETV Bharat / state

ಸ್ಯಾಂಡಲ್​ವುಡ್​ನಲ್ಲಿ ಡ್ರಗ್ಸ್​ ಜಾಲ.. ಉಪ್ಪು ತಿಂದವರು ನೀರು ಕುಡಿಯಲೇಬೇಕು- ಸಚಿವ ಭೈರತಿ ಬಸವರಾಜ್ - Bhairati Basavaraju Statement on Drugs at Sandalwood

ಹುಬ್ಬಳ್ಳಿ ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಬೇಗನೆ ಪೂರ್ಣಗೊಳಿಸುವಂತೆ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಅಧಿಕಾರಿಗಳಿಗೆ ಸೂಚಿಸಿದ್ದಾರೆ..

dsd
ಸಚಿವ ಭೈರತಿ ಬಸವರಾಜ್​ ಹೇಳಿಕೆ
author img

By

Published : Sep 6, 2020, 2:35 PM IST

ಹುಬ್ಬಳ್ಳಿ : ಸ್ಯಾಂಡಲ್​ವುಡ್​ನಲ್ಲಿ ಡ್ರಗ್ಸ್ ಜಾಲ ಪತ್ತೆಯಾಗಿರೋದು ಬೇಸರದ ಸಂಗತಿ. ಯಾರು ತಪ್ಪು ಮಾಡಿದ್ದಾರೋ ಅಂತವರ ವಿರುದ್ಧ ಕಠಿಣ ಕಾನೂನು ಜರುಗಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಸ್ಪಷ್ಟಪಡಿಸಿದ್ದಾರೆ.

ಡ್ರಗ್ಸ್‌ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಭೈರತಿ ಬಸವರಾಜ್ ಪ್ರತಿಕ್ರಿಯೆ

ನಗರದಲ್ಲಿ ಮಾತನಾಡಿದ ಅವರು, ಇಡೀ ದೇಶದಲ್ಲಿಯೇ ಡ್ರಗ್ಸ್ ಜಾಲ ವ್ಯಾಪಿಸಿಕೊಂಡಿದೆ. ಈ ಬಗ್ಗೆ ಗೃಹ ಸಚಿವರು ಉತ್ತರ ನೀಡುವರು. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಪೊಲೀಸ್ ಇಲಾಖೆ ಈ ಕುರಿತು ಸೂಕ್ತ ತನಿಖೆ ನಡೆಸುತ್ತಿದೆ ಎಂದರು.

ಇದಕ್ಕೂ ಮುನ್ನ ಎಂಎಸ್ಎಂಇ ಇಂಡಸ್ಟ್ರಿಯಲ್ ಏರಿಯಾ, ಕಾಟನ್ ಮಾರುಕಟ್ಟೆಯ ಇಂಟಿಗ್ರೇಟೆಡ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್, ಎಂಜಿಪಾರ್ಕ್, ಚಿಟಗುಪ್ಪಿ ಆಸ್ಪತ್ರೆ, ಮೀನಿನ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.