ಹುಬ್ಬಳ್ಳಿ: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಖಂಡಿಸಿ ಭಾರತೀಯ ಕಿಸಾನ್ ಸಂಘಟನೆ ಪ್ರತಿಭಟನೆ ನಡೆಸಿತು.
ನಗರದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದ ರೈತರು ಹಾಗೂ ಸಂಘಟನೆಯ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಜಾರಿಗೊಳಿಸಿರುವ ಕಾಯ್ದೆಯಿಂದ ಸಣ್ಣ ಹಾಗೂ ಅತಿ ಸಣ್ಣ ರೈತರು ಭೂಮಿ ಕಳೆದುಕೊಳ್ಳಲಿದ್ದಾರೆ. ಭೂ ದಲ್ಲಾಳಿಗಳು ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಗಳು ರೈತರಿಗೆ ಹಣದ ಆಮಿಷ ತೋರಿಸಿ ರೈತರ ಭೂಮಿಯನ್ನು ಕಬಳಿಸಲಿದ್ದಾರೆ ಎಂದು ಆರೋಪಿಸಿದ ಅವರು, ಕೂಡಲೇ ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ಕೈಬಿಡಬೇಕೆಂದು ಒತ್ತಾಯಿಸಿದರು.