ಹುಬ್ಬಳ್ಳಿ: ಎಕ್ಸಿಸ್ ಬ್ಯಾಂಕ್ ಎಟಿಎಂನಲ್ಲಿ ಹಣ ಡ್ರಾ ಮಾಡುವ ಸಂಬಂಧ ವ್ಯಕ್ತಿಗಳಿಬ್ಬರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ನಗರದ ಚೆನ್ನಮ್ಮ ಸರ್ಕಲ್ ಬಳಿ ಇರುವ ಎಕ್ಸಿಸ್ ಬ್ಯಾಂಕ್ ಎಟಿಎಂ ಬಳಿ ನಡೆದಿದೆ.
ಎಟಿಎಂನಿಂದ ಹಣ ಡ್ರಾ ಮಾಡಲು ಸರದಿಯಲ್ಲಿ ನಿಲ್ಲುವ ಕುರಿತಂತೆ ಮಾತಿನ ಚಕಮಕಿ ಏರ್ಪಟ್ಟಿದ್ದು, ಬಳಿಕ ಇಬ್ಬರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಸರದಿ ಸಾಲಿನಲ್ಲಿ ನಿಲ್ಲುವ ಕ್ಷುಲ್ಲಕ ಕಾರಣಕ್ಕೆ ಹೊಡೆದಾಡಿರುವ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಎಟಿಎಂನಲ್ಲಿ ಭದ್ರತಾ ಸಿಬ್ಬಂದಿ ಕೊರತೆಯಿಂದ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.