ETV Bharat / state

ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ಓರ್ವ ಸಾವು, ಮತ್ತೊಬ್ಬ ಗಂಭೀರ- ಸಿಸಿಟಿವಿ ದೃಶ್ಯ - ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ

ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್​ ಡಿಕ್ಕಿ ಹೊಡೆದು ಓರ್ವ ವ್ಯಕ್ತಿ ಸಾವನ್ನಪ್ಪಿ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

Bike accident in Hubli
ಪಾದಚಾರಿಗೆ ಬೈಕ್ ಸವಾರ ಡಿಕ್ಕಿ; ಸಿಸಿಟಿವಿಯಲ್ಲಿ ದೃಶ್ಯ ಸೆರೆ
author img

By

Published : Dec 12, 2022, 6:14 PM IST

ಸಿಸಿಟಿವಿ ದೃಶ್ಯ

ಹುಬ್ಬಳ್ಳಿ: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್​ ಡಿಕ್ಕಿ ಹೊಡೆದು ಸವಾರ ಸಾವನ್ನಪ್ಪಿರುವ ಘಟನೆ ಕಲಘಟಗಿ ಪಟ್ಟಣದಲ್ಲಿಂದು ಸಂಭವಿಸಿತು. ಅಪಘಾತದ ದೃಶ್ಯಾವಳಿ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪಶು ಸಂಗೋಪನಾ ಇಲಾಖೆಯ ನೌಕರ ಶ್ರೀಕಾಂತ್ ನಿಂಬಾಳ್ಕರ್ (37) ಮೃತ ದುರ್ದೈವಿ.

ನೌಕರಿಗೆಂದು ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಶ್ರೀಕಾಂತ್​ ಅವರ ತಲೆಯಿಂದ ರಕ್ತಸ್ರಾವವಾಗಿದ್ದು, ಸ್ಥಳದಲ್ಲೇ ಅಸುನೀಗಿದ್ದಾರೆ. ಪಾದಚಾರಿ ಸಿದ್ದು ಎಮ್ಮೆಟಿಗೆ ಗಂಭೀರವಾಗಿ ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.