ಧಾರವಾಡ : ಸುಮಾರು 15ಕ್ಕೂ ಹೆಚ್ಚು ಸ್ಪ್ಲೆಂಡರ್ ಬೈಕ್ ಕಳ್ಳತನ ಮಾಡಿದ್ದ ಚಾಲಾಕಿ ಬೈಕ್ ಕಳ್ಳರನ್ನು ಬಂಧಿಸುವಲ್ಲಿ ವಿದ್ಯಾಗಿರಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಧಾರವಾಡ ರಾಜೀವಗಾಂಧಿ ನಗರದ ಅಭಿಷೇಕ (20) ಹಾಗೂ ಈರಣಗೌಡ (20) ಎಂಬ ಯುವಕರು 15ಕ್ಕೂ ಹೆಚ್ಚು ಬೈಕ್ಗಳನ್ನು ಕಳ್ಳತನ ಮಾಡಿದ್ದರು. ಧಾರವಾಡದ ವಿದ್ಯಾಗಿರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಗಾರೆ ಕೆಲಸ ಮಾಡುತ್ತಲೇ ನಗರದಲ್ಲಿ ನಿಂತಿರುವ ಬೈಕ್ಗಳನ್ನು ಎಗರಿಸಿ ಮಾರಾಟ ಮಾಡುತ್ತಿದ್ದು, ಇದೀಗ ಪೊಲೀಸರ ಅತಿಥಿಯಾಗಿದ್ದಾರೆ. ಪೊಲೀಸರ ಈ ಭರ್ಜರಿ ಕಾರ್ಯಾಚರಣೆಗೆ ಎಸಿಪಿ ಅನುಷಾ ಅವರು ಅಭಿನಂದನೆ ಸಲ್ಲಿಸಿದ್ದಾರೆ.