ಧಾರವಾಡ: ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಹಾಗೂ ಸಂಸದ ಪ್ರಹ್ಲಾದ್ ಜೋಶಿ ಗೆಲುವು ಸಾಧಿಸಬೇಕು ಎಂದು ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಪೂಜೆ ಸಲ್ಲಿಸಿದ್ದಾರೆ.
ನಗರದ ಐತಿಹಾಸಿಕ ದುರ್ಗಾದೇವಿ ದೇವಸ್ಥಾನದಲ್ಲಿ ಮೋದಿ ಹಾಗೂ ಜೋಶಿ ಮತ್ತೊಮ್ಮೆ ಗೆಲುವು ಸಾಧಿಸಲಿ ಎಂದು ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು. ಪೂಜೆ ಸಲ್ಲಿಸಿ ಬಳಿಕ ಮಾತನಾಡಿದ ಕಾರ್ಯಕರ್ತರು, ರಾಷ್ಟ್ರದ ಏಳಿಗೆ ಹಾಗೂ ಭದ್ರತೆಗಾಗಿ ನರೇಂದ್ರ ಮೋದಿಯವರು ಶ್ರಮ ಪಡುತ್ತಿದ್ದಾರೆ. ಹಾಗಾಗಿ ಈ ಬಾರಿ 350ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದು ಮತ್ತೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂದು ನಾವು ವಿಶೇಷ ಪೂಜೆ ಸಲ್ಲಿಸಿದ್ದೇವೆ ಎಂದರು.
ಸತತ ಮೂರು ಬಾರಿ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಿರುವ ಜೋಶಿ ಅವರು ಈ ಬಾರಿಯೂ ಗೆಲುವು ಸಾಧಿಸಿ ಕೇಂದ್ರ ಸರ್ಕಾರದಲ್ಲಿ ಸಚಿವ ಸ್ಥಾನ ಪಡೆಯಬೇಕು ಎಂದು ನಾವು ಪ್ರಾರ್ಥಿಸಿದ್ದೇವೆ. ನಾಳಿನ ಫಲಿತಾಂಶದಲ್ಲಿ ಎನ್ಡಿಎ ಹೆಚ್ಚಿನ ಸ್ಥಾನ ಪಡೆಯಬೇಕೆಂಬುದೇ ನಮ್ಮ ಆಶಯವಾಗಿದೆ ಎಂದರು.