ETV Bharat / state

ಪಂಜಾಬ್​​ ಸರ್ಕಾರದ ವಿರುದ್ಧ ಹುಬ್ಬಳ್ಳಿ-ಧಾರವಾಡದಲ್ಲಿ ಬಿಜೆಪಿ ಪ್ರತಿಭಟನೆ

ಪ್ರತಿಭಟನೆ ವೇಳೆ ಕಾರ್ಯಕರ್ತರು ಟೈರ್​​ಗೆ ಬೆಂಕಿ ಹಚ್ಚಿದ್ದಕ್ಕೆ ನೀರು ಹಾಕಿದ ಪೊಲೀಸ್ ಇನ್ಸ್‌ಸ್ಪೆಕ್ಟರ್‌ಗೆ ಮಾಜಿ ಶಾಸಕಿ ಸೀಮಾ ಮಸೂತಿ ಆವಾಜ್ ಹಾಕಿದ ಘಟನೆ ಕೂಡ ನಡೆಯಿತು..

ಹುಬ್ಬಳ್ಳಿ-ಧಾರವಾಡದಲ್ಲಿ ಪಂಜಾಬ್​​ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

author img

By

Published : Jan 7, 2022, 3:44 PM IST

Updated : Jan 7, 2022, 4:28 PM IST

ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿಯವರಿಗೆ ಅವಮಾನ ಮಾಡಿದ ಹಾಗೂ ಭದ್ರತಾ ವೈಫಲ್ಯಕ್ಕೆ ಕಾರಣವಾದ ಪಂಜಾಬ್ ಸರ್ಕಾರ ವಜಾಗೊಳಿಸಲು ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟಿಸಿದರು.

ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ಸಂಧರ್ಭದಲ್ಲಿ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೇ ಮಾತಿನ ಚಕಮಕಿ ನಡೆಯಿತು.

ಹುಬ್ಬಳ್ಳಿ-ಧಾರವಾಡದಲ್ಲಿ ಬಿಜೆಪಿ ಪ್ರತಿಭಟನೆ

ಪ್ರತಿಭಟನೆಯ ಮೆರವಣಿಗೆ ಉದ್ದಕ್ಕೂ ಕಾಂಗ್ರೆಸ್ ಪಕ್ಷದ ವಿರುದ್ಧ ಹಾಗೂ ಪಂಜಾಬ್ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ, ಕಾಂಗ್ರೆಸ್ ಜಿಲ್ಲಾ ಕಚೇರಿ ಮುಂಭಾಗದಲ್ಲಿ ಪಂಜಾಬ್ ಸಿಎಂ ಚರಂಜಿತ್‌ ಸಿಂಗ್‌ ಚನ್ನಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಪಂಜಾಬ್ ರಾಜ್ಯ ಸರ್ಕಾರ ದೇಶದ ಪ್ರಧಾನಿ ನರೇಂದ್ರ ಮೋದಿಯವರನ್ನು 15 ನಿಮಿಷಗಳ ಕಾಲ ರಸ್ತೆಯಲ್ಲಿ ನಿಲ್ಲುವಂತೆ ಮಾಡಿ ಅವಮಾನ ಮಾಡಿದೆ.‌ ಪ್ರಧಾನಿಗಳು ರಾಜ್ಯಕ್ಕೆ ಬಂದ ಸಂದರ್ಭದಲ್ಲಿ ಅವರ ಭದ್ರತೆ ಜೊತೆಗೆ ಅವರನ್ನು ಗೌರವಯುತವಾಗಿ ಸ್ವಾಗತ ಮಾಡುವುದು ಆಯಾಯ ರಾಜ್ಯ ಸರ್ಕಾರಗಳ ಮುಖ್ಯ ಕರ್ತವ್ಯವಾಗಿರುತ್ತದೆ.

ಆದರೆ, ಪಂಜಾಬ್‌ ಮುಖ್ಯಂಮತ್ರಿಗಳು ಸ್ವಾಗತಕ್ಕೂ ಬಾರದೆ, ಭದ್ರತೆಯಲ್ಲೂ ಲೋಪ ಮಾಡಿ, ಅವಮಾನ‌ ಮಾಡಿರುವುದನ್ನು ದೇಶದ ಜನತೆ‌ ಕ್ಷಮಿಸುವುದಿಲ್ಲ. ಕೂಡಲೇ ಪಂಜಾಬ್ ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ವಜಾಮಾಡಬೇಕು ಎಂದು ಒತ್ತಾಯಿಸಿದರು.

ಧಾರವಾಡದಲ್ಲೂ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ : ಧಾರವಾಡದ ರೀಗಲ್‌ ಸರ್ಕಲ್‌ನಲ್ಲಿರುವ ಕಾಂಗ್ರೆಸ್ ಕಚೇರಿ ಎದುರು ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ‌ ನಡೆಸಿದರು. ಬಿಜೆಪಿ ಕಚೇರಿಯಿಂದ ರ್ಯಾಲಿಯಲ್ಲಿ ಕಾಂಗ್ರೆಸ್ ಕಚೇರಿಗೆ ತೆರಳಿದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ವಿರುದ್ಧ ಘೋಷಣೆ ಕೂಗಿ, ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟಿಸಿ, ಪಂಜಾಬ್ ಸಿಎಂ ಭಾವಚಿತ್ರ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ವೇಳೆ ಕಾರ್ಯಕರ್ತರು ಟೈರ್​​ಗೆ ಬೆಂಕಿ ಹಚ್ಚಿದ್ದಕ್ಕೆ ನೀರು ಹಾಕಿದ ಪೊಲೀಸ್ ಇನ್ಸ್‌ಸ್ಪೆಕ್ಟರ್‌ಗೆ ಮಾಜಿ ಶಾಸಕಿ ಸೀಮಾ ಮಸೂತಿ ಆವಾಜ್ ಹಾಕಿದ ಘಟನೆ ಕೂಡ ನಡೆಯಿತು.

Last Updated : Jan 7, 2022, 4:28 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.