ಹುಬ್ಬಳ್ಳಿ: ಉತ್ತರ ಕರ್ನಾಟಕದ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ಕುಮಾರ ಕಟೀಲು ನೇತೃತ್ವದಲ್ಲಿ ನಗರದ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ಸಭೆ ಆರಂಭಗೊಂಡಿದೆ.
ಸಭೆಯಲ್ಲಿ ಡಿ.ಸಿಎಂ.ಗಳಾದ ಲಕ್ಷ್ಮಣ ಸವದಿ, ಗೋವಿಂದ ಕಾರಜೋಳ, ಸಚಿವರಾದ, ಜಗದೀಶ್ ಶೆಟ್ಟರ್, ಬಸವರಾಜ್ ಬೊಮ್ಮಾಯಿ, , ಶಶಿಕಲಾ ಜೊಲ್ಲೆ, ಸಿ.ಸಿ.ಪಾಟೀಲ್ ಭಾಗಿಯಾಗಿದ್ದಾರೆ.
ಉಪ ಚುನಾವಣೆ ಹಿನ್ನೆಲೆಯಲ್ಲಿ ನಡೆಯತ್ತಿರುವ ಸಭೆಯಲ್ಲಿ ಉತ್ತರ ಕರ್ನಾಟಕದ ಏಳು ಕ್ಷೇತ್ರಗಳಲ್ಲಿ ನಡೆಯುತ್ತಿರುವ ಬೈ ಎಲೆಕ್ಷನ್ ಕುರಿತು ಚರ್ಚೆ ನಡೆಸಲಾಗುತ್ತಿದೆ. ಗೋಕಾಕ್, ಕಾಗವಾಡ, ಅಥಣಿ, ಯಲ್ಲಾಪುರ, ಹಿರೇಕೆರೂರು,ರಾಣೇಬೆನ್ನೂರು, ವಿಜಯನಗರ ಕ್ಷೇತ್ರದ ಚುನಾವಣೆಗೆ ಪೂರಕ ಸಿದ್ಧತೆ ಕುರಿತು ಸಭೆಯಲ್ಲಿ ಚರ್ಚೆಯಾಗಲಿದೆ.
ಉಪಚುನಾವಣೆ ಹಿನ್ನೆಲೆಯಲ್ಲಿ ಆರಂಭಗೊಂಡಿರುವ ಸಮಾಲೋಚನಾ ಸಭೆಯಲ್ಲಿ ಹಾವೇರಿ ಹಿರೇಕೆರೂರು, ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ಮುಖಂಡರು ಕೂಡ ಭಾಗಿಯಾಗಿದ್ದು, ಸಂಜೆಯ ಹೊತ್ತಿಗೆ ಕೋರ್ಕಮಿಟಿ ಸಭೆ ನಂತರ ಅಂತಿಮವಾಗಿ ಅಭ್ಯರ್ಥಿಗಳ ಕುರಿತು ಮಾಹಿತಿ ನೀಡಲಾಗುವುದು ಎಂದು ಸಿ.ಎಂ. ಬಿ.ಎಸ್. ಯಡಿಯೂರಪ್ಪ ತಿಳಿಸಿದರು.