ಹುಬ್ಬಳ್ಳಿ: ಬಿಜೆಪಿ ನಾಯಕರು ಬರೀ ಸುಳ್ಳುಗಳನ್ನು ಹೇಳುತ್ತಾರೆ ಎಂದು ಹಿರೇಕೇರೂರು ಶಾಸಕ ಬಿ.ಸಿ. ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ಗೆ ತಮ್ಮ ಸಮುದಾಯವದವರು ವೋಟ್ ಹಾಕಿ ಅಪರಾಧ ಮಾಡಲ್ಲ ಎಂದಿದ್ದ ಪ್ರತಿಪಕ್ಷ ನಾಯಕ ಯಡಿಯೂರಪ್ಪ ಹೇಳಿಕೆಗೆ ಬಿ ಸಿ ಪಾಟೀಲ್ ತಿರುಗೇಟು ನೀಡಿದರು. ಕಾಂಗ್ರೆಸ್ ಪಕ್ಷದಿಂದ ನಮ್ಮ ಸಮುದಾಯದ 16 ಶಾಸಕರು ಆಯ್ಕೆಯಾಗಿದ್ದೇವೆ. ನಾವೆಲ್ಲರೂ ಅಪ್ಪಟ ಬಸವಣ್ಣನ ಅನುಯಾಯಿಗಳು ಎಂದು ಹೇಳಿದರು.
ಸಂಪುಟ ವಿಸ್ತರಣೆ :
ಲೋಕಸಭೆ ಚುನಾವಣೆ ಬಳಿಕ ಸಂಪುಟ ವಿಸ್ತರಣೆ. ಈ ಬಾರಿ ಸಚಿವ ಸಂಪುಟದಲ್ಲಿ ಅವಕಾಶ ಸಿಗುವ ಭರವಸೆ ಇದೆ ಎಂದು ಶಾಸಕ ಪಾಟೀಲ್ ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.
ಗದಗ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಿಗೆ ಸಂಪುಟದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಹಾಗಾಗಿ ಅತೃಪ್ತಿ ಹೊಂದಿದ್ದೆ. ಆದರೆ ಸಿದ್ದರಾಮಯ್ಯ ಅವರು ಸಚಿವ ಸ್ಥಾನದ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.