ETV Bharat / state

ಸುಪ್ರೀಂ ತೀರ್ಪಿನ ನಂತರ ಟಿಕೆಟ್​ ನಿರ್ಧಾರ : ಅರವಿಂದ ಲಿಂಬಾವಳಿ ಸ್ಪಷ್ಟನೆ - Arvind Limbaveli latest news

ಅನರ್ಹ ಶಾಸಕರ ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಪಟ್ಟಂತೆ ಆಯಾ ಕ್ಷೇತ್ರಗಳ ಮುಖಂಡರ ಅಭಿಪ್ರಾಯದ ಸಭೆ ನಡೆಸಿದ್ದೇವೆ. ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರನ್ನ ಗೆಲ್ಲಿಸುವುದು ಎಲ್ಲರ ಕರ್ತವ್ಯ ಎಂದು ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಅರವಿಂದ ಲಿಂಬಾವಳಿ
author img

By

Published : Oct 26, 2019, 8:16 PM IST

ಹುಬ್ಬಳ್ಳಿ : ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರನ್ನ ಗೆಲ್ಲಿಸುವುದು ಎಲ್ಲರ ಕರ್ತವ್ಯ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅರವಿಂದ ಲಿಂಬಾವಳಿ

ನಗರದಲ್ಲಿಂದು ಖಾಸಗಿ ಹೋಟೆಲ್​ನಲ್ಲಿ ಹಮ್ಮಿಕೊಳ್ಳಲಾಗಿದ್ದ ಬಿಜೆಪಿ ಕೋರ್ ಕಮಿಟಿ ಸಭೆಯ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಅನರ್ಹ ಶಾಸಕರ ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಪಟ್ಟಂತೆ ಆಯಾ ಕ್ಷೇತ್ರಗಳ ಮುಖಂಡರ ಅಭಿಪ್ರಾಯದ ಸಭೆ ನಡೆಸಿದ್ದೇವೆ. ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರನ್ನ ಗೆಲ್ಲಿಸುವುದು ಎಲ್ಲರ ಕರ್ತವ್ಯ ಎಂದರು.

ಈ ಹಿನ್ನೆಲೆಯಲ್ಲಿ ಕಾರ್ಯಕರ್ತರಲ್ಲಿ ಬಲ ತುಂಬುವ ನಿಟ್ಟಿನಲ್ಲಿ ಸಭೆ ನಡೆಸಲಾಗಿದೆ. ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯನ್ನ ಇನ್ನೂ ನಿರ್ಧರಿಸಿಲ್ಲ. ಸದ್ಯ ಅನರ್ಹ ಶಾಸಕರ ಪ್ರಕರಣ ಸುಪ್ರೀಂಕೋರ್ಟ್ ಅಂಗಳದಲ್ಲಿದೆ ಎಂದು ಅವರು ಹೇಳಿದರು.‌ ಸುಪ್ರೀಂ ತೀರ್ಪಿನ ನಂತರ ಆಯಾ ಕ್ಷೇತ್ರಗಳಲ್ಲಿ ಟಿಕೆಟ್ ಯಾರಿಗೆ ನೀಡಬೇಕೆಂಬುದು ತೀರ್ಮಾನ ಮಾಡಲಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದರು. ರಾಜೀನಾಮೆ ನೀಡಿರುವ ಶಾಸಕರು ಈವರೆಗೂ ನಮ್ಮ ಪಕ್ಷಕ್ಕೆ ಸೇರ್ಪಡೆಗೊಂಡಿಲ್ಲ, ಸೇರ್ಪಡೆಗೊಳ್ಳುತ್ತೇವೆ ಎಂದೂ ಹೇಳಿಲ್ಲ. ಹೀಗಾಗಿ ಅವರಿಗೆ ಟಿಕೆಟ್ ನೀಡುವಂತಹ ಪ್ರಶ್ನೆಯೇ ಇಲ್ಲ ಎಂದರು. ಇನ್ನು ಮುಂದೆ ಬರುವ ವಿಧಾನ ಪರಿಷತ್ ಚುನಾವಣೆಗಾಗಿ ಎಲ್ಲ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಟಿಕೆಟ್ ಆಕಾಂಕ್ಷಿಗಳ‌ ಪಟ್ಟಿ ದೊಡ್ಡದಿದೆ. ಈ ಬಗ್ಗೆಯೂ ಕೋರ್​ಕಮಿಟಿ ಸಭೆಯಲ್ಲಿ ಚರ್ಚೆ ಮಾಡಲಾಗಿದ್ದು, ಪಕ್ಷದ ಹಿರಿಯರು ಯಾರಿಗೆ ಟಿಕೆಟ್ ನೀಡಬೇಕು ಎಂಬ ಬಗ್ಗೆ ತೀರ್ಮಾನ ತಗೆದುಕೊಳ್ಳಲಿದ್ದಾರೆ ಎಂದರು.

Intro:ಹುಬ್ಬಳ್ಳಿ-13

ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರನ್ನ ಗೆಲ್ಲಿಸುವುದು ಎಲ್ಲರ ಕರ್ತವ್ಯ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಹೇಳಿದರು.
ನಗರದಲ್ಲಿಂದು ಖಾಸಗಿ ಹೊಟೇಲನಲ್ಲಿ ಹಮ್ಮಿಕೊಳ್ಳಲಾಗಿದ್ದ ಬಿಜೆಪಿ ಕೋರ್ ಕಮೀಟಿ ಸಭೆಯ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು,ಅನರ್ಹ ಶಾಸಕರ ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಪಟ್ಟಂತೆ ಆಯಾ ಕ್ಷೇತ್ರಗಳ ಮುಖಂಡರ ಅಭಿಪ್ರಾಯದ ಸಭೆ ನಡೆಸಿದ್ದೇವೆ. ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರನ್ನ ಗೆಲ್ಲಿಸುವುದು ಎಲ್ಲರ ಕರ್ತವ್ಯ ಎಂದರು.
ಈ ಹಿನ್ನೆಲೆಯಲ್ಲಿ ಕಾರ್ಯಕರ್ತರಲ್ಲಿ ಬಲ ತುಂಬುವ ನಿಟ್ಟಿನಲ್ಲಿ ಸಭೆ ನಡೆಸಲಾಗಿದೆ. ಕ್ಷೇತ್ರಗಳ ಅಭ್ಯರ್ಥಿಗಳು ಯಾರೆಂಬುದರ ಕುರಿತು ಇನ್ನೂ ನಿರ್ಧರಿಸಿಲ್ಲ. ಸಧ್ಯ ಅನರ್ಹ ಶಾಸಕರ ಪ್ರಕರಣ ಸುಪ್ರೀಂ ಕೋರ್ಟ್ ಅಂಗಳದಲ್ಲಿದೆ ಎಂದು ಅವರು ಹೇಳಿದರು.‌ ಸುಪ್ರೀಂ ತೀರ್ಪಿನ ನಂತರ ಆಯಾ ಕ್ಷೇತ್ರಗಳಲ್ಲಿ ಟಿಕೆಟ್ ಯಾರಿಗೆ ನೀಡಬೇಕೆಂಬುದು ತೀರ್ಮಾನ ಮಾಡಲಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದರು. ರಾಜೀನಾಮೆ ನೀಡಿರುವ ಶಾಸಕರು ಈವರೆಗೂ ನಮ್ಮ ಪಕ್ಷಕ್ಕೆ ಸೇರ್ಪಡೆಗೊಂಡಿಲ್ಲ, ಸೇರ್ಪಡೆಗೊಳ್ಳುತ್ತೇವೆ ಎಂದು ಹೇಳಿಲ್ಲ. ಹೀಗಾಗಿ ಅವರಿಗೆ ಟಿಕೆಟ್ ನೀಡುವಂತಹ ಪ್ರಶ್ನೆಯೇ ಇಲ್ಲ ಎಂದರು. ಇನ್ನು ಮುಂದೆ ಬರುವ ವಿಧಾನ ಪರಿಷತ್ ಚುನಾವಣೆಗಾಗಿ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದ್ದು ಟಿಕೆಟ್ ಆಕಾಂಕ್ಷಿಗಳ‌ ಪಟ್ಟಿ ದೊಡ್ಡದಿದೆ. ಈ ಬಗ್ಗೆಯೂ ಕೋರಕಮಿಟಿ ಸಭೆಯಲ್ಲಿ ಚರ್ಚೆ ಮಾಡಲಾಗಿದ್ದು, ಪಕ್ಷದ ಹಿರಿಯರು ಯಾರಿಗೆ ಟಿಕೆಟ್ ನೀಡಬೇಕು ಎಂಬ ಬಗ್ಗೆ ತೀರ್ಮಾನ ತಗೆದುಕೊಳ್ಳಲಿದ್ದಾರೆ ಎಂದರು.

ಬೈಟ್- ಅರವಿಂದ ಲಿಂಬಾವಳ್ಳಿ, ಬಿಜೆಪಿ ಪ್ರಧಾನ‌ ಕಾರ್ಯದರ್ಶಿBody:H B GaddadConclusion:Etv hubli
ETV Bharat Logo

Copyright © 2024 Ushodaya Enterprises Pvt. Ltd., All Rights Reserved.