ETV Bharat / state

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ವಿಚಾರ: ಇಂದು ಹೈಕೋರ್ಟ್​ನಲ್ಲಿ ಅರ್ಜಿ ವಿಚಾರಣೆ

author img

By ETV Bharat Karnataka Team

Published : Sep 15, 2023, 11:13 AM IST

Updated : Sep 15, 2023, 2:51 PM IST

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಸಂಬಂಧ ಪಾಲಿಕೆಯ ಠರಾವು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ಧಾರವಾಡ ಹೈಕೋರ್ಟ್​ ಪೀಠದಲ್ಲಿ ನಡೆಯಲಿದೆ.

bjp-mlas-demands-installation-of-ganesha-idol-at-hubballi-idgah-maidan
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ವಿಚಾರ: ಇಂದು ಹೈಕೋರ್ಟ್​ನಲ್ಲಿ ಅರ್ಜಿ ವಿಚಾರಣೆ

ಮಹಾನಗರ ಪಾಲಿಕೆ ಬಳಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು

ಹುಬ್ಬಳ್ಳಿ : ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಹೋರಾಟ ಮುಂದುವರೆದಿದೆ. ಮಹಾನಗರ ಪಾಲಿಕೆಯ ಆವರಣದಲ್ಲಿ ಶಾಸಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಿದ್ದು, ಎರಡನೇ ದಿನಕ್ಕೆ ಹೋರಾಟ ಕಾಲಿಟ್ಟಿದೆ. ಈ ವೇಳೆ ಶಾಸಕ ಮಹೇಶ್​ ಟೆಂಗಿನಕಾಯಿ ಕೂಡ ಆಗಮಿಸಿ ಪ್ರತಿಭಟನೆಗೆ ಬೆಂಬಲ ನೀಡಿದರು.

ಗುರುವಾರ ರಾತ್ರಿ ಮಹಾನಗರ ಪಾಲಿಕೆ ಸದಸ್ಯರು ಹಾಗೂ ಶಾಸಕ‌ ಅರವಿಂದ ಬೆಲ್ಲದ ಒಳಗೊಂಡಂತೆ ಬಿಜೆಪಿ ಕಾರ್ಯಕರ್ತರು ಮಹಾನಗರ ಪಾಲಿಕೆ ಬಳಿ ಇಡೀ ರಾತ್ರಿ ಪ್ರತಿಭಟನೆ ನಡೆಸಿದರು. ಇತ್ತ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ಸಂಬಂಧ ಪಾಲಿಕೆಯ ಠರಾವು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಇಂದು ವಿಚಾರಣೆಯಾಗಲಿದೆ. ಧಾರವಾಡ ಹೈಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.

ಹುಬ್ಬಳ್ಳಿಯ ಅಂಜುಮನ್ ಇಸ್ಲಾಂ ಸಂಸ್ಥೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹಿನ್ನೆಲೆಯಲ್ಲಿ ಹೈಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತ ನೆಟ್ಟಿದೆ. ಇದರೊಂದಿಗೆ ಹಕ್ಕುಚ್ಯುತಿ ಪ್ರಶ್ನೆ ಮಾಡಿ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿ ಸುವರ್ಣ ಕಲಗುಂಟ್ಲಾ ಅವರಿಂದ ಮತ್ತೊಂದು ಅರ್ಜಿ ಸಲ್ಲಿಕೆಯಾಗಿದ್ದು, ಈ ಒಂದು ಅರ್ಜಿ ಕೂಡ ಇಂದು ವಿಚಾರಣೆ ಆಗಲಿದೆ.

ಇದನ್ನೂ ಓದಿ : ಭಟ್ಕಳ : ಸಾರ್ವಜನಿಕ ಗಣೇಶೋತ್ಸವ ಮಂಡಳಿ ಜೊತೆ ಪೊಲೀಸ್​ ಇಲಾಖೆ ಶಾಂತಿ ಸಭೆ

ಕಳೆದ 2 ದಿನಗಳ ಹಿಂದೆ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ‌ಮಾತನಾಡಿದ ಶಾಸಕ ಅರವಿಂದ ಬೆಲ್ಲದ್​, "ಗಣಪತಿ ಪ್ರತಿಷ್ಠಾಪನೆ ಕುರಿತು ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ಅದಕ್ಕೆ ಯಾವುದೇ ಉತ್ತರ ಬಂದಿಲ್ಲ. ರಾಣಿ ಚನ್ನಮ್ಮ (ಈದ್ಗಾ ಮೈದಾನ) ಮಹಾನಗರ ಪಾಲಿಕೆಯ ಜಾಗ. ಕಾಂಗ್ರೆಸ್ ಸರ್ಕಾರ ಇರುವುದರಿಂದ ಅಧಿಕಾರಿಗಳ ಮೇಲೆ ಒತ್ತಡ ಹಾಕಲಾಗುತ್ತಿದೆ. ಆದರೆ, ಯಾರೇ ವಿರೋಧ ಮಾಡಿದರೂ, ಪೂರ್ವದಲ್ಲಿ ಸೂರ್ಯ ಉದಯಿಸುವುದು ಎಷ್ಟು ಸತ್ಯವೋ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವುದು ಕೂಡ ಅಷ್ಟೇ ಸತ್ಯ ಎಂದು ಹೇಳಿದ್ದರು.

ಇದನ್ನೂ ಓದಿ : ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಬಿಜೆಪಿ ಪಟ್ಟು: ಅಹೋರಾತ್ರಿ ಪ್ರತಿಭಟನೆಗೆ ನಿರ್ಧಾರ

ಇನ್ನೊಂದೆಡೆ, ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಮುಂದಾಗಿದ್ದು, ಅಂತಹ ಧಾರ್ಮಿಕ ಆಚರಣೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಅನುಮತಿ ನೀಡಿದರೆ ಸಂಘರ್ಷವಾಗುತ್ತದೆ. ನಾವು ಬೀದಿಗಿಳಿದು ಹೋರಾಡುತ್ತೇವೆ ಎಂದು ವಿವಿಧ ದಲಿತ ಸಂಘ - ಸಂಸ್ಥೆಗಳ ಮಹಾಮಂಡಳಿ ಮುಖಂಡರಾದ ಗುರುನಾಥ ಉಳ್ಳಿಕಾಶಿ ಹೇಳಿದ್ದಾರೆ.

ಇದನ್ನೂ ಓದಿ : ಗಣೇಶ ಮೂರ್ತಿ ಪ್ರತಿಷ್ಠಾಪನೆ ಶತ ಸಿದ್ದ: ಶಾಸಕ ಅರವಿಂದ ಬೆಲ್ಲದ್​

Last Updated : Sep 15, 2023, 2:51 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.