ETV Bharat / state

ಅಟಲ್ ​​ಜೀ ಜನ್ಮದಿನದಂದು ಸುಶಾಸನ ದಿನ: ದೇಶದ 9 ಕೋಟಿ ರೈತರ ಖಾತೆಗಳಿಗೆ 18,000 ಕೋಟಿ ರೂ. ಜಮೆ - ಅಟಲ್​​ಜೀ ಜನ್ಮದಿನ

ಹುಬ್ಬಳ್ಳಿಯಲ್ಲಿ ಇಂದು ಬಿಜೆಪಿ ನಾಯಕರು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಅವರ ಜನ್ಮದಿನದಂದು ಸುಶಾಸನ ದಿನ ಆಚರಣೆ ಮಾಡಲು ನಿರ್ಧರಿಸಿದ್ದಾರೆ. ಈ ಕುರಿತಂತೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಮಾಹಿತಿ ನೀಡಿದರು.

ಬಿಜೆಪಿ ನಾಯಕರ ಸುದ್ದಿಗೋಷ್ಠಿ
BJP Leaders press meet
author img

By

Published : Dec 23, 2020, 4:10 PM IST

ಹುಬ್ಬಳ್ಳಿ: ಮಾಜಿ ಪ್ರಧಾನಿ, ಅಜಾತ ಶತ್ರು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ಡಿ. 25ರಂದು ಸುಶಾಸನ ದಿನ ಆಚರಣೆ ಮಾಡಲಾಗುವುದು ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು.

ಬಿಜೆಪಿ ನಾಯಕರ ಸುದ್ದಿಗೋಷ್ಠಿ

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ರಾಜಕೀಯ ಇತಿಹಾಸದಲ್ಲಿಯೇ ಅಟಲ್ ಬಿಹಾರಿ ವಾಜಪೇಯಿ ಅವರು ಸಾಕಷ್ಟು ಜನಮನ್ನಣೆ ಪಡೆದಿದ್ದಾರೆ. ಅವರ ಜನ್ಮದಿನದ ಅಂಗವಾಗಿ ಉತ್ತಮ ಸರ್ಕಾರ, ಉತ್ತಮ ಆಡಳಿತ ಎಂಬ ಸದುದ್ದೇಶದಿಂದ ಸುಶಾಸನ ದಿನವನ್ನು ರಾಜ್ಯಾದ್ಯಂತ ಆಚರಣೆ ಮಾಡಲಾಗುತ್ತದೆ. ಇದರ ಜೊತೆಗೆ ದೇಶದ ರಾಷ್ಟ್ರೀಯ ರೈತ ದಿನಾಚರಣೆ ಹಿನ್ನೆಲೆಯಲ್ಲಿ ಫಸಲ್​​ ಭೀಮಾ ಯೋಜನೆಯಡಿ ದೇಶದ 9 ಕೋಟಿ ರೈತರಿಗೆ 18 ಸಾವಿರ ಕೋಟಿ ರೂ.ಗಳನ್ನು ಅವರ ಖಾತೆಗೆ ಜಮೆ ಮಾಡಲಾಗುವುದು ಎಂದು ತಿಳಿಸಿದರು.

ಓದಿ: ನೈಟ್ ಕರ್ಫ್ಯೂ ಜಾರಿ: ಸಿಎಂ ಭೇಟಿ ಮಾಡಿ ಚರ್ಚಿಸಿದ ನಗರ ಪೊಲೀಸ್ ಆಯುಕ್ತ

ರಾಜ್ಯದಲ್ಲಿ ರೈತರ ಸಮಸ್ಯೆಗಳಿಗೆ ಪೂರಕವಾದ ಯೋಜನೆಯನ್ನು ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೊಳಿಸಿವೆ. ಅಲ್ಲದೆ ಸಾಕಷ್ಟು ಜನಪರ ಕಾಳಜಿಯನ್ನು ಹೊಂದಿರುವ ಬಿಜೆಪಿ ಸರ್ಕಾರ, ತನ್ನ ಆಡಳಿತ ಅವಧಿಯಲ್ಲಿ ಸಾಕಷ್ಟು ಯೋಜನೆಗಳನ್ನು ರೈತರಿಗಾಗಿ ತಂದಿದೆ ಎಂದರು.

ಎಪಿಎಂಸಿ ಕುರಿತು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡದ ಅವರು, ಯಾವುದೇ ಕಾರಣಕ್ಕೂ ಎಪಿಎಂಸಿ ಬಂದ್ ಆಗುವುದಿಲ್ಲ. ರೈತರ ಹಿತ ಕಾಯುವ ಬಗ್ಗೆ ಬಿಜೆಪಿ ಹೊಸ ಹೊಸ ಯೋಜನೆ ರೂಪಿಸುತ್ತಿದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.