ETV Bharat / state

ಬಿ.ಕೆ. ಹರಿಪ್ರಸಾದ್ ಮಾನಸಿಕ ಸ್ಥಿತಿ ಸರಿಯಿಲ್ಲ, ಕಾಂಗ್ರೆಸ್​​ನಲ್ಲಿ ಲೆಕ್ಕಕ್ಕಿಲ್ಲದ ನಾಯಕ: ಗೋವಿಂದ ಕಾರಜೋಳ

''ಬಿ.ಕೆ. ಹರಿಪ್ರಸಾದ್ ಮಾನಸಿಕ ಸ್ಥಿತಿ ಸರಿಯಿಲ್ಲ, ಹರಿಪ್ರಸಾದ್ ಅವರು ಕಾಂಗ್ರೆಸ್​​ನಲ್ಲಿ ಲೆಕ್ಕಕ್ಕಿಲ್ಲದ ನಾಯಕ ಆಗಿದ್ದಾರೆ'' ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಆಕ್ರೋಶ ವ್ಯಕ್ತಪಡಿಸಿದರು.

Govinda Karajola
ಬಿ.ಕೆ. ಹರಿಪ್ರಸಾದ್ ಮಾನಸಿಕ ಸ್ಥಿತಿ ಸರಿಯಲ್ಲ, ಕಾಂಗ್ರೆಸ್​​ನಲ್ಲಿ ಲೆಕ್ಕಕ್ಕಿಲ್ಲದ ನಾಯಕ: ಗೋವಿಂದ ಕಾರಜೋಳ
author img

By ETV Bharat Karnataka Team

Published : Dec 25, 2023, 1:47 PM IST

ಮಾಜಿ ಡಿಸಿಎಂ ಗೋವಿಂದ ಕಾರಜೋಳ ಪ್ರತಿಕ್ರಿಯೆ

ಹುಬ್ಬಳ್ಳಿ: ಬಿ.ಕೆ. ಹರಿಪ್ರಸಾದ್ ಮಾನಸಿಕ ಸ್ಥಿತಿ ಸರಿಯಿಲ್ಲ. ಹರಿಪ್ರಸಾದ್ ಕಾಂಗ್ರೆಸ್​ನಲ್ಲಿ ಲೆಕ್ಕಕ್ಕೆ ಇಲ್ಲದ ನಾಯಕ. ಕಾಂಗ್ರೆಸ್​ನಲ್ಲಿ ಅವರಿಗೆ ಮಾನಸಿಕ ಹಿಂಸೆ ಆಗಿದೆ. ಹಿಂಸೆ ತಾಳಲಾರದೇ ಈ ರೀತಿಯಾಗಿ ಮಾತನಾಡ್ತಾ ಇದ್ದಾರೆ'' ಎಂದು ಬಿಜೆಪಿ ನಾಯಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದರು.

ಬಿಜೆಪಿಯವರು ಗೋಡ್ಸೆ ಅನುಯಾಯಿಗಳು ಎಂಬ ಹೇಳಿಕೆಗೆ ನಗರದಲ್ಲಿ ಸೋಮವಾರ ‌ಪ್ರತಿಕ್ರಿಯೆ ನೀಡಿದ ಅವರು, ''ಹರಿಪ್ರಸಾದ್ ಅವರಿಗೆ ಬಹಳ ಬೆಲೆ ಕೊಡಬೇಕಾಗಿಲ್ಲ. ದೇಶಕ್ಕೆ ಯಾರು ಏನು ಅ‌ಂತಾ ಗೊತ್ತು'' ಎಂದು ಬಿಜೆಪಿ ವಿರುದ್ಧದ ಹೇಳಿಕೆಗೆ ತಿರುಗೇಟು ನೀಡಿದರು. ''ಹರಿಪ್ರಸಾದ್ ಒಬ್ಬ ಹಿರಿಯ ರಾಜಕಾರಣಿ. ನಾಲಿಗೆ ಮೇಲೆ ಹಿಡಿತ ಇರಿಸಿಕೊಂಡು ಮಾತನಾಡಬೇಕು. ಅವರ ಮಾತು ಅವರಿಗೆ ಗೌರವ ತರುವುದಿಲ್ಲ. ಅವರು ದೊಡ್ಡವರು ಆಗಲ್ಲ. ಅವರ ವ್ಯಕ್ತಿತ್ವ ಬೆಳೆಯಲ್ಲ. ಸಜ್ಜನರಿಗೆ ಆದರ್ಶವಾಗಿರಬೇಕು. ಅವರ ಹೀನ ಸಂಸ್ಕೃತಿ ತೋರಿಸುತ್ತದೆ'' ಎಂದರು.

ಕಳ್ಳನ ಕೈಯಲ್ಲಿ ಬಿಜೆಪಿ ನಾಯಕರು ಆಡಳಿತ ಕೊಟ್ಟಿದ್ದಾರೆ ಎಂಬ ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ''ಬಸನಗೌಡ ಪಾಟೀಲ್ ಯತ್ನಾಳ ಒಬ್ಬ ಹಿರಿಯರು. ಪಕ್ಷದ ನಾಯಕರು ತೆಗೆದುಕೊಂಡ ತೀರ್ಮಾನಕ್ಕೆ ಗೌರವ ಕೊಡಬೇಕು. ಯುವಕರಿಗೆ ಆದ್ಯತೆ ಕೊಡಬೇಕು ಅಂತಾ ಮಾಡಿದ್ದಾರೆ. ನಾವು ಎಲ್ಲರೂ ಮಾರ್ಗದರ್ಶನ ಮಾಡಬೇಕು. ನಾನು ಎಲ್ಲಾ ನಾಯಕರ ಪರವಾಗಿ ಕೇಳಿಕೊಳ್ಳುವೆ. ಕಳೆದ ಚುನಾವಣೆಯಲ್ಲಿ ಸ್ವಲ್ಪ ಪಕ್ಷಕ್ಕೆ ಹಿನ್ನಡೆಯಾಗಿದೆ'' ಎಂದರು.

ವಿ.ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ಆಗತಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ''ಯಾವುದೇ ಕಾರಣಕ್ಕೂ ಸೋಮಣ್ಣ ಕಾಂಗ್ರೆಸ್ ಸೇರಲ್ಲ. ಕಾಂಗ್ರೆಸ್ ಮುಳುಗುವ ಹಡಗು. ಪಂಚ ರಾಜ್ಯ ಚುನಾವಣೆ ಬಳಿಕೆ ಕಾಂಗ್ರೆಸ್ ಪರಿಸ್ಥಿತಿ ಏನಾಗಿದೆ. ಇನ್ನು ಇಂಡಿಯಾ ಒಕ್ಕೂಟ ವ್ಯವಸ್ಥೆಯಲ್ಲಿಯೇ ಎಲ್ಲವೂ ಸರಿಯಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಅಂತಾ ಚರ್ಚೆ ಆದಾಗ, ಇಂಡಿಯಾ ಒಕ್ಕೂಟದಲ್ಲಿ ಇನ್ನಷ್ಟು ಬಿರುಕು ಬಿಟ್ಟಿದೆ. ಲೋಕಸಭಾ ಚುನಾವಣೆ ಬರುವುದರೊಳಗಾಗಿ ಇಂಡಿಯಾ ಛಿದ್ರವಾಗಿ ಹೋಗುತ್ತದೆ'' ಎಂದು ಕಿಡಿಕಾರಿದರು.

ಇದನ್ನೂ ಓದಿ: 'ಸಚಿವ ಶಿವಾನಂದ ಪಾಟೀಲರಿಗೆ ರೈತರನ್ನು ನಿಂದಿಸಿ ಅವಹೇಳನ ಮಾಡುವ ಉಸ್ತುವಾರಿ ವಹಿಸಿಕೊಟ್ಟಂತಿದೆ': ಬಿವೈ ವಿಜಯೇಂದ್ರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.