ಹುಬ್ಬಳ್ಳಿ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಗೆ ಕರವೇ ಕಾರ್ಯಕರ್ತರು ಕಪ್ಪು ಬಟ್ಟೆ ತೋರಿಸಿ, ಘೇರಾವ್ ಹಾಕಿದ ಘಟನೆ ಇಲ್ಲಿನ ಕಿಮ್ಸ್ ಆಸ್ಪತ್ರೆಯ ಆವರಣದಲ್ಲಿ ನಡೆದಿದೆ.
ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಯಾರು ನನಗೆ ಗೊತ್ತಿಲ್ಲ ಎಂದು ಹೇಳುವ ಮೂಲಕ ಅವರ ಬಗ್ಗೆ ಸಚಿವ ಡಾ. ಸುಧಾಕರ್ ಹಗುರವಾಗಿ ಮಾತನಾಡಿದ್ದಾರೆಂದು ಆರೋಪಿಸಿ ಸಚಿವರಿಗೆ ಕಪ್ಪುಬಟ್ಟೆ ತೋರಿಸಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸಚಿವರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.
ಸಚಿವರ ಜತೆ ವಾಗ್ವಾದಕ್ಕಿಳಿದು ಕಾರಿಗೆ ಅಡ್ಡಲಾಗಿ ಮಲಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ಕೂಡಲೇ ನಾರಾಯಣಗೌಡ ಅವರ ಕ್ಷಮೆ ಕೇಳಬೇಕೆಂದು ಪಟ್ಟು ಹಿಡಿದರು. ಸದ್ಯ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.