ETV Bharat / state

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ: ಸ್ಥಳದಲ್ಲಿ ಬಿಗುವಿನ ವಾತಾವರಣ

author img

By

Published : Oct 21, 2019, 2:03 PM IST

Updated : Oct 21, 2019, 3:02 PM IST

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.

ಸ್ಥಳದಲ್ಲಿ ಬಿಗುವಿನ ವಾತಾವರಣ

ಹುಬ್ಬಳ್ಳಿ: ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.

ರೈಲ್ವೆ ನಿಲ್ದಾಣದಲ್ಲಿ ಬಾಕ್ಸ್​ವೊಂದನ್ನು ತೆರೆದು ನೋಡಿದಾಗ ಅದು ಸ್ಫೋಟಗೊಂಡು ವ್ಯಕ್ತಿಯೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ವ್ಯಕ್ತಿ ಹುಬ್ಬಳ್ಳಿಯ ಅರಳಿ ಕಟ್ಟಿ ನಿವಾಸಿ ಹುಸೇನ್ ನಾಯಕ್‌ (23) ಎಂದು ತಿಳಿದು ಬಂದಿದೆ.

ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ

ಅಧಿಕಾರಿಯೊಬ್ಬರು ನಿಂಬೆಹಣ್ಣಿನ ತರಹದ ವಸ್ತು ನೀಡಿದ್ರು. ಅದೇನೆಂದು ನೋಡಲು ತಿಳಿಸಿದರು. ಅದನ್ನು ಒಡೆದೆ. ಕೂಡಲೇ ಬ್ಲಾಸ್ಟ್​ ಆಯ್ತು ಎಂದು ಗಾಯಾಳು ಹುಸೇನ್​ ನಾಯಕ್​ ತಿಳಿಸಿದ್ದಾರೆ.

ಸ್ಥಳಕ್ಕೆ ಆರ್​ಪಿಎಫ್ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಶ್ವಾನ ದಳದೊಂದಿಗೆ ರೈಲ್ವೆ ನಿಲ್ದಾಣದಲ್ಲಿ ತಪಾಸಣೆ ನಡೆಸಲಾಗುತ್ತಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸ್ಫೋಟಗೊಂಡಿದ್ದು ಬಾಂಬ್​ ಇರಬಹುದೇ ಅಥವಾ ಮೊಬೈಲ್ ಎಂಬ ಬಗ್ಗೆ ಖಚಿತ ಮಾಹಿತಿ ಇನ್ನೂ ತಿಳಿದು ಬಂದಿಲ್ಲ.

Intro:Body:

hbl blast

Conclusion:
Last Updated : Oct 21, 2019, 3:02 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.