ಹುಬ್ಬಳ್ಳಿ: ರಾಜ್ಯ ರಾಜಕಾರಣದಲ್ಲಿ ದಿನದಿಂದ ದಿನಕ್ಕೆ ಒಂದಿಲ್ಲೊಂದು ರೀತಿಯ ಸಂಚಲನ ಸೃಷ್ಟಿಯಾಗುತ್ತಲೇ ಇದೆ. ಸದ್ಯ ಸಚಿವ ಸಂಪುಟ ವಿಸ್ತರಣೆಯ ವಿಚಾರ ಮುನ್ನೆಲೆಗೆ ಬಂದಿದೆ. ಈ ಹಿಂದೆ ಸಿಎಂ ರೇಸ್ನಲ್ಲಿದ್ದ ಶಾಸಕ ಅರವಿಂದ ಬೆಲ್ಲದ ಅವರ ಮನೆಗೆ ಸಿಎಂ ಬಸವರಾಜ ಬೊಮ್ಮಾಯಿ ದಿಢೀರ್ ಭೇಟಿ ನೀಡಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಉಪಹಾರ ಸೇವಿಸಲು ಶಾಸಕ ಅರವಿಂದ ಬೆಲ್ಲದ ಅವರ ಮನೆಗೆ ಬಂದರು. ಈ ಬಾರಿ ಶಾಸಕ ಬೆಲ್ಲದ ಅವರು ಸಚಿವರಾಗುವ ಸಾಧ್ಯತೆ ಹೆಚ್ಚಿದೆ ಎನ್ನುವಂತ ಮಾತುಗಳು ಬಿಜೆಪಿ ಆಪ್ತವಲಯಲ್ಲಿ ಕೇಳಿ ಬರುತ್ತಿವೆ. ಸಂಪುಟ ವಿಸ್ತರಣೆ ಬಿಸಿಬಿಸಿ ಚರ್ಚೆಯಾಗುತ್ತಿರುವ ನಡುವೆ ಬೆಲ್ಲದ ನಿವಾಸಕ್ಕೆ ಸಿಎಂ ಭೇಟಿ ನೀಡಿದ್ದು, ಸಂಪುಟ ವಿಸ್ತರಣೆಯಲ್ಲಿ ಬೆಲ್ಲದಗೆ 'ಬೆಲ್ಲ' ಪಕ್ಕಾನಾ? ಎಂಬಂಥ ಮಾತುಗಳು ಹರಿದಾಡುತ್ತಿವೆ. ಯಡಿಯೂರಪ್ಪನವರ ವಿರೋಧಿ ಪಾಳೆಯದ ಬೆಲ್ಲದ ನಿವಾಸಕ್ಕೆ ಸಿಎಂ ಭೇಟಿ ಯಾಕೆ? ಎಂಬುವಂತ ಪ್ರಶ್ನೆಯೂ ಹುಟ್ಟಿಕೊಂಡಿದೆ.
ಇದನ್ನೂ ಓದಿ: ಸಾಲು ಸಾಲು ಪ್ರಕರಣಗಳು ಸರ್ಕಾರದ ಆಡಳಿತ ವೈಫಲ್ಯ ತೋರಿಸುತ್ತದೆ: ಡಿಕೆಶಿ