ಧಾರವಾಡ: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯುತ್ತಿರುವ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಂಧ ವಿದ್ಯಾರ್ಥಿಗಳಿಗೆ ಬ್ರೈಲಿ ಕೈಗಡಿಯಾರ ವಿತರಣೆ ಮಾಡಲಾಯಿತು.
ಧಾರವಾಡದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ (ಕರ್ನಾಟಕ ಅಭಿವೃದ್ದಿ ಕಾರ್ಯಕ್ರಮ) ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ವಿಜಯಲಕ್ಷ್ಮಿ ಪಾಟೀಲ್, ಉಪಾಧ್ಯಕ್ಷ ಶಿವಾನಂದ ಕರಿಗಾರ, ಜಿಪಂ ಸಿಇಒ ಡಾ. ಬಿ.ಸಿ. ಸತೀಶ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರು ಕೈ ಗಡಿಯಾರ ವಿತರಿಸಿದರು.
ಉಪಕಾರ್ಯದರ್ಶಿ ಎಸ್.ಜಿ.ಕೊರವರ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅಮರನಾಥ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.