ಹುಬ್ಬಳ್ಳಿ: BRTC ಬಸ್ ಮತ್ತು ಸ್ಕೂಟಿ ನಡುವೆ ಡಿಕ್ಕಿಯಾದ ಪರಿಣಾಮ ಸ್ಕೂಟಿ ಸವಾರನ ಸ್ಥಿತಿ ಗಂಭೀರವಾದ ಘಟನೆ ನಗರದ ನವನಗರ ಆರ್ಟಿಓ ಹತ್ತಿರ ನಡೆದಿದೆ.
ಅಮರನಗರದ ನಿವಾಸಿ ಮಹೇಶ ಹೊಸಮನಿ ಎಂಬಾತ ಸ್ಕೂಟಿ ತೆಗೆದುಕೊಂಡು ಬಿಆರ್ ಟಿಎಸ್ ರಸ್ತೆ ಕ್ರಾಸ್ ಮಾಡುವಾಗ ಈ ಘಟನೆ ನಡೆದಿದ್ದು, ಸ್ಥಳೀಯರ ಸಹಾಯದಿಂದ ಕೂಡಲೇ ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಈ ರಸ್ತೆಯಲ್ಲಿ ಅಪಘಾತಗಳು ಹೆಚ್ಚುತ್ತಿವೆ ಎಂದು ಸ್ಥಳೀಯರು ರಸ್ತೆಯನ್ನು ತಡೆದು ಬಿಆರ್ ಟಿಎಸ್ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ಕ್ರಾಸ್ ಮಾಡುವುದರ ಬಗ್ಗೆ ಬೇರೆ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯ ಮಾಡಿದರು. ಈ ಕುರಿತು ನವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದಿ : ಡ್ರ್ಯಾಗರ್ ತೋರಿಸಿ ದರೋಡೆ ನಡೆಸಿದ ಪ್ರಕರಣ: ಮೂವರು ಆರೋಪಿಗಳ ಬಂಧನ