ಧಾರವಾಡ: ಚಿಗರಿ ಬಸ್ ಡಿಕ್ಕಿ ಹೊಡೆದು ಪಾದಚಾರಿಯೊಬ್ಬ ಸ್ಥಳದಲ್ಲಿ ಮೃತಪಟ್ಟ ಘಟನೆ ಧಾರವಾಡ ನವಲೂರ ಬಳಿ ನಡೆದಿದೆ.
ನಗರದ ಓಂನಗರದ ನಿವಾಸಿ ಅನಿಲಕುಮಾರ (45) ಎಂಬುವವರೇ ಮೃತಪಟ್ಟ ವ್ಯಕ್ತಿ ಎನ್ನಲಾಗುತ್ತಿದೆ. ಹುಬ್ಬಳ್ಳಿಯಿಂದ ಬರುತ್ತಿದ್ದ ಚಿಗರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ.
ಮೃತ ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.