ಹುಬ್ಬಳ್ಳಿ: ಸಚಿವ ಸಂಪುಟ ವಿಸ್ತರಣೆ, ಪುನರ್ ರಚನೆ ಸಿಎಂ ಪರಮಾಧಿಕಾರ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸಚಿವ ಸಂಪುಟ ವಿಸ್ತರಣೆ ಆಗಿದ್ದು, ಸಿಎಂ ಕೂಡ ಖಾತೆ ಹಂಚಿಕೆ ಮಾಡೋದಾಗಿ ಹೇಳಿದ್ದಾರೆ. ಇನ್ನೊಮ್ಮೆ ಸಚಿವ ಸಂಪುಟ ವಿಸ್ತರಣೆ ಮಾಡುತ್ತಾರೆಂಬುದರ ಬಗ್ಗೆ ಮಾಹಿತಿ ಇಲ್ಲ. ಇದರ ಬಗ್ಗೆ ಮುಖ್ಯಮಂತ್ರಿಗಳಿಗೆ ಸಲಹೆ ನೀಡುವ ಮಾತೇ ಇಲ್ಲ ಎಂದರು.
ಬಿ.ಎಸ್.ಯಡಿಯೂರಪ್ಪ ದುರ್ಬಲ ಸಿಎಂ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಅವರ ಮಾತಿಗೆ ಉತ್ತರ ಕೊಡೋಕೆ ಆಗಲ್ಲ. ಅಲ್ಲದೇ ಕಾಂಗ್ರೆಸ್ನಲ್ಲಿ ಅಧ್ಯಕ್ಷಗಿರಿಗಾಗಿ ಹೊಡೆದಾಟ ನಡೆಯುತ್ತಿದೆ. ಸಿದ್ದರಾಮಯ್ಯ ನಾಯಕತ್ವ ಹಾಗೂ ಕೈ ನಾಯಕತ್ವ ದುರ್ಬಲವಿದೆ. ಮೊದಲು ದುರ್ಬಲರು ಯಾರೆಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಟಾಂಗ್ ಕೊಟ್ಟರು.
ಬಜೆಟ್ನಲ್ಲಿ ಉತ್ತರ ಕರ್ನಾಟಕದ ಭಾಗದ ಅಭಿವೃದ್ಧಿಗೆ ಸಿಎಂ ಜೊತೆ ಚರ್ಚೆ ಮಾಡುತ್ತೇನೆ. ಈಗಾಗಲೇ ಕರ್ನಾಟಕದಲ್ಲಿ ಹಣ ಹೂಡಿಕೆಗೆ ಸಾವಿರಕ್ಕೂ ಹೆಚ್ಚು ಹೂಡಿಕೆದಾರರನ್ನು ಕರೆಯಲಾಗಿದೆ ಎಂದರು.