ETV Bharat / state

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಕ್ಯಾನ್ಸರ್​​ ಕುರಿತು ಜಾಗೃತಿ ಕಾರ್ಯಕ್ರಮ - ಎಚ್​ಸಿಜಿಎನ್ಎಂಆರ್ ಕ್ಯಾನ್ಸರ್ ಸೆಂಟರ್

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಹೆಚ್​ಸಿಜಿಎನ್ಎಂಆರ್ ಕ್ಯಾನ್ಸರ್ ಸೆಂಟರ್ ವತಿಯಿಂದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
author img

By

Published : Feb 4, 2020, 7:39 AM IST

ಹುಬ್ಬಳ್ಳಿ: ನಗರದ ರೈಲ್ವೆ ನಿಲ್ದಾಣದಲ್ಲಿ ಹೆಚ್​ಸಿಜಿಎನ್ಎಂಆರ್ ಕ್ಯಾನ್ಸರ್ ಸೆಂಟರ್ ವತಿಯಿಂದ ಆಯೋಜಿಸಲಾಗಿದ್ದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮಕ್ಕೆ ಎಸ್​​ಡಬ್ಲ್ಯೂಆರ್ ವ್ಯವಸ್ಥಾಪಕ ನಿರ್ದೇಶಕ ಅಜಯಕುಮಾರ್ ಸಿಂಗ್ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕ್ಯಾನ್ಸರ್ ರೋಗ ಮಾರಕವಾಗಿದೆ. ಇದರ ವಿರುದ್ಧದ ಹೋರಾಟಕ್ಕೆ ನೈಋತ್ಯ ರೈಲ್ವೆ ವಲಯ ಕೂಡಾ ಕೈ ಜೋಡಿಸಲಿದೆ. ಕ್ಯಾನ್ಸರ್​​ ವಿಷಯಕ್ಕೆ ಬಂದರೆ ಮಾದಕ ವಸ್ತುಗಳ ವ್ಯಸನದಿಂದಲೇ ಇದು ಹೆಚ್ಚಾಗಿ ಬರುತ್ತದೆ. ಮಾದಕ ವಸ್ತುಗಳ ವ್ಯಸನ ಆರೋಗ್ಯಕ್ಕೆ ಮಾತ್ರವಲ್ಲದೆ ಕುಟುಂಬಕ್ಕೆ ಮಾರಕವಾಗಿದೆ. ಕ್ಷಣಿಕ ಸುಖದ ಹಿಂದೆ ಅಮೂಲ್ಯವಾದ ಜೀವನವನ್ನು ವ್ಯರ್ಥ ಮಾಡಿಕೊಳ್ಳದಿರಿ ಎಂದು ಸಲಹೆ ನೀಡಿದರು.

Cancer awareness programe in hubballi
ಹೆಚ್​ಸಿಜಿಎನ್ಎಂಆರ್ ಕ್ಯಾನ್ಸರ್ ಸೆಂಟರ್ ವತಿಯಿಂದ ಕಾರ್ಯಕ್ರಮ

ದೇಶದಲ್ಲಿ ಪ್ರತಿ ವರ್ಷ 18 ಲಕ್ಷ ಜನ ಕ್ಯಾನ್ಸರ್​​ಗೆ ತುತ್ತಾಗುತ್ತಿದ್ದಾರೆ. ಪ್ರತಿ ನಿಮಿಷಕ್ಕೆ ಇಬ್ಬರು ಸಾವನ್ನಪ್ಪುತ್ತಿದ್ದಾರೆ. ಈ ಮಾರಕ ಕಾಯಿಲೆ ತಡೆಯಲು ಜಾಗೃತಿ ಅಗತ್ಯವಾಗಿದೆ. ಈ ಹಿನ್ನೆಲೆ ಮೊದಲ ಬಾರಿಗೆ ವಿಶೇಷ ರೀತಿಯಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಕ್ಯಾನ್ಸರ್ ಸೆಂಟರ್ ಮುಖ್ಯಸ್ಥರು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.