ETV Bharat / state

ಚುನಾವಣಾ ಅಭ್ಯರ್ಥಿಗಳ ಕ್ರಿಮಿನಲ್​ ಪ್ರಕಟಣೆ ಕಡ್ಡಾಯ: ಡಿ ಸಿ ದೀಪಾ ಚೋಳನ್​

ಚುನಾವಣಾ ಅಭ್ಯರ್ಥಿಗಳು ತಮ್ಮ ಕ್ರಿಮಿನಲ್​ ಹಿನ್ನಲೆಯನ್ನು ಪ್ರಕಟಿಸಬೇಕೆಂದು ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್​ ಹೇಳಿದ್ದಾರೆ.

ಡಿ ಸಿ ದೀಪಾ ಚೋಳನ
author img

By

Published : Mar 11, 2019, 3:31 PM IST

ಧಾರವಾಡ: ಲೋಕಸಭಾ ಚುನಾವಣೆ ದಿನಾಂಕ ಪ್ರಕಟವಾದ ಹಿನ್ನೆಲೆ ನಗರದಲ್ಲಿ ನಿನ್ನೆಯಿಂದಲೇ ನೀತಿ ಸಂಹಿತೆ ಜಾರಿಯಲ್ಲಿದೆ. ಜನಪ್ರತಿನಿಧಿಗಳಿಗೆ ನೀಡಿದ್ದ ಸರ್ಕಾರಿ ವಾಹನಗಳನ್ನ ವಶಕ್ಕೆ ತೆಗೆದುಕೊಳ್ಳಲಾಗಿದೆ. ಶಸ್ತ್ರಾಸ್ತ್ರ ಹೊಂದಿದವರಿಗೆ ನೋಟಿಸ್ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್​ ಮಾಹಿತಿ ನೀಡಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಭ್ಯರ್ಥಿಗಳು ತಮ್ಮ ಮೇಲಿನ ಕ್ರಿಮಿನಲ್ ಕೇಸ್ ಗಳ ಬಗ್ಗೆ ಮಾಧ್ಯಮ ಮತ್ತು ಪತ್ರಿಕೆಗಳಲ್ಲಿ ಮೂರು ಬಾರಿ ಪ್ರಕಟಿಸುವಂತೆ ಸೂಚನೆ ನೀಡಲಾಗಿದೆ. ಧಾರವಾಡ ಜಿಲ್ಲೆಗೆ 2 ನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಎಪ್ರಿಲ್‌ 23 ಕ್ಕೆ ಮತದಾನ ನಡೆಯಲಿದೆ ಎಂದು ತಿಳಿಸಿದರು.

ಡಿ ಸಿ ದೀಪಾ ಚೋಳನ

ಜಿಲ್ಲೆಯಲ್ಲಿ 7 ವಿಧಾನಸಭಾ ಕ್ಷೇತ್ರ ಮತ್ತು ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ ಸೇರಿ ಒಟ್ಟು 1,68,8067 ಮತದಾರರಿದ್ದಾರೆ. ಪುರುಷ ಮತದಾರರು 8,58,370, ಮಹಿಳಾ‌ ಮತದಾರರು 8,29,697 ಇದ್ದಾರೆ. ಒಟ್ಟು 1872 ಮತಗಟ್ಟೆಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.

ನಗರದಲ್ಲಿ ನಡೆಯುವ ಅಕ್ರಮ ತಡೆಗಟ್ಟಲು 23 ಕಡೆ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ. 42 ಫ್ಲೈಯಿಂಗ್ ಸ್ಕ್ವಾಡ್ ಟೀಮ್, 69 ಸ್ಥಿರ ಕಣ್ಗಾವಲು ತಂಡ, 9 ಎಕ್ಸ್​ಪಂಡಿಚರ್​ ಟೀಮ್, ಸೇರಿದಂತೆ ಹಲವು ತಂಡಗಳು ಕಾರ್ಯ ನಿರ್ವಹಣೆ ಮಾಡಲಿವೆ. ನೀತಿ ಸಂಹಿತೆ ಉಲ್ಲಂಘಿಸಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ಎಚ್ಚರಿಕೆ ನೀಡಿದ್ದಾರೆ.

ನೀತಿ ಸಂಹಿತೆ ಜಾರಿಯಾದ ನಂತರ ನಗರದಲ್ಲಿನ ಎಲ್ಲಾ ಪ್ಲೆಕ್ಸ್, ಬ್ಯಾನರ್​, ಬಂಟಿಂಗ್ಸ್ ಸೇರಿದಂತೆ ಜಾಹೀರಾತು ಫಲಕಗಳನ್ನು ತೆರವುಗೊಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

sample description
ETV Bharat Logo

Copyright © 2024 Ushodaya Enterprises Pvt. Ltd., All Rights Reserved.