ಹುಬ್ಬಳ್ಳಿ: ಕಾರಿನ ಟೈಯರ್ ಸ್ಫೋಟಗೊಂಡು ರಸ್ತೆಯ ಡಿವೈಡರ್ಗೆ ಡಿಕ್ಕಿ ಹೊಡೆದ ಘಟನೆ ನಗರದ ಆಕ್ಸ್‌ಫರ್ಡ್ ಕಾಲೇಜು ಬಳಿಯ ಸೇತುವೆ ಮೇಲೆ ನಡೆದಿದೆ.
ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ ಅವರಿಗೆ ಸೇರಿದ ಕಾರು ಇದಾಗಿದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಭೇಟಿ ನೀಡಿದ ಸಂಚಾರಿ ಪೋಲಿಸರು, ರಸ್ತೆ ಮಧ್ಯೆ ನಿಂತಿದ್ದ ಕಾರನ್ನು ಪಕ್ಕಕ್ಕೆ ನಿಲ್ಲಿಸಿ, ಚಾಲಕನನ್ನು ಆಸ್ಪತ್ರೆಗೆ ಕಳುಹಿಸಿದ್ದಾರೆ. ಈ ಕುರಿತು ಪೂರ್ವ ಸಂಚಾರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.