ಧಾರವಾಡ: ಕಾರು ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಮುಲ್ಲಾ ದಾಬಾ ಬಳಿ ನಡೆದಿದೆ.
ಮಾಜಖಾರ ಪಠಾಣ, ಮುಜಭೀಲ್ ಅಧೋನಿ ಮೃತರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮತ್ತಿಬ್ಬರನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ರೋಜಾ ಮುಗಿಸಿಕೊಂಡು ಧಾರವಾಡಕ್ಕೆ ಆಗಮಿಸುತ್ತಿದ್ದ ವೇಳೆ ಬೆಳಗಿನ ಜಾವ ಕಾರು ಪಲ್ಟಿಯಾಗಿದೆ ಎನ್ನಲಾಗ್ತಿದೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.