ಧಾರವಾಡ: ಕಾರು ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಗರದ ಬೈಪಾಸ್ ಯರಿಕೊಪ್ಪ ಡೌನಲ್ ಬಳಿ ಸಂಭವಿಸಿದೆ.
ಮೃತರಲ್ಲಿ ಓರ್ವ ವ್ಯಕ್ತಿಯ ಗುರುತು ಪತ್ತೆಯಾಗಿದ್ದು, ಇನ್ನೋರ್ವನ ಗುರುತು ಪತ್ತೆಯಾಗಿಲ್ಲ. ಚಿತ್ರದುರ್ಗದ ರಾಷ್ಟ್ರೀಯ ಭೂಸ್ವಾಧೀನ ಅಧಿಕಾರಿ ಮಧು ಪುಟ್ಟಪ್ಪ (42) ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದ ವೇಳೆ, ಬೆಳಗಾವಿಯಿಂದ ಹುಬ್ಬಳ್ಳಿಗೆ ಬರುತ್ತಿದ್ದ ಟ್ಯಾಂಕರ್ ಕಾರ್ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.
ಕಾರು ಚಾಲಕ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.