ಹುಬ್ಬಳ್ಳಿ: ಕಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಕುಸುಗಲ್ ಗ್ರಾಮದ ಸಿಂಗ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಮೃತ ಹಾಗೂ ಗಾಯಗೊಂಡ ಯುವಕರು ಆಂಧ್ರಪ್ರದೇಶದ ಮೂಲದವರು ಎನ್ನಲಾಗ್ತಿದ್ದು, ಹೆಸರು ತಿಳಿದು ಬಂದಿಲ್ಲ. ನವಲಗುಂದದಿಂದ ಹುಬ್ಬಳ್ಳಿ ಕಡೆ ಬರುತ್ತಿದ್ದ ಕಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಗಂಭೀರವಾಗಿ ಗಾಯಗೊಂಡ ಯುವಕನನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.