ಹುಬ್ಬಳ್ಳಿ : ಇಂಜಿನ್ನಲ್ಲಿ ಬೆಂಕಿ ಕಾಣಿಸಿದ ಪರಿಣಾಮ ನಡುರಸ್ತೆಯಲ್ಲಿಯೇ ಕಾರೊಂದು ಧಗ ಧಗನೆ ಹೊತ್ತಿ ಉರಿದ ಘಟನೆ ನಗರದ ಹೊರ ವಲಯದ ಗಬ್ಬೂರಿನ ಆರ್ಟಿಒ ಕಚೇರಿಯ ಬಳಿ ನಡೆದಿದೆ.
ಚಾವರ್ಲೆಟ್ ಟವೆರಾ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾನೆ. ಶಾರ್ಟ್ ಸರ್ಕ್ಯೂಟ್‌ನಿಂದಲೇ ಕಾರಿನಲ್ಲಿ ಬೆಂಕಿ ಕಾಣಿಸಿದೆ ಎಂದು ತಿಳಿದು ಬಂದಿದೆ.
ಹುಬ್ಬಳ್ಳಿಯಿಂದ ಹೊರಟ್ಟಿದ್ದ ಕಾರು ಇದಾಗಿದೆ. ಯಾರಿಗೆ ಸೇರಿದ್ದು, ಎಲ್ಲಿಗೆ ತೆರಳುತ್ತಿತ್ತು ಎಂಬುದರ ಕುರಿತಂತೆ ಮಾಹಿತಿ ಲಭ್ಯವಾಗಿಲ್ಲ. ಘಟನಾ ಸ್ಥಳಕ್ಕೆ ಬೆಂಡಿಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಇದನ್ನೂ ಓದಿ: ಬಿಎಸ್‌ವೈ ನನ್ನ ನಡುವೆ ವೈಯಕ್ತಿಕ ಮೈತ್ರಿಯಾಗಿದೆ : ಮಾಜಿ ಸಿಎಂ ಹೆಚ್ಡಿಕೆ