ಹುಬ್ಬಳ್ಳಿ : ಪಾಕಿಸ್ತಾನಕ್ಕೆ ಜೈಕಾರ ಹಾಕಿ ವಿಡಿಯೋ ಮಾಡಿದ್ದ ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳ ಮೇಲೆ ದೇಶದ್ರೋಹಿ ಚಟುವಟಿಕೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಗರದ ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನ ಪ್ರಾಶುಂಪಾಲರಾದ ಬಸವರಾಜ್ ಅನಾಮಿಯವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಗೋಕುಲ್ ರೋಡ್ ಪೊಲೀಸರು ಐಪಿಸಿ ಸೆಕ್ಷನ್ ಅಡಿಯಲ್ಲಿ ದೇಶದ್ರೋಹ, ಪ್ರಾದೇಶಿಕ ಗುಂಪುಗಳ ನಡುವೆ ದ್ವೇಷ ಭಾವನೆ ಹೆಚ್ಚಿಸುವುದು ಸೇರಿದಂತೆ ಸುಮಾರು ಐದು ಪ್ರಕರಣಗಳನ್ನು ಯುವಕರ ಮೇಲೆ ದಾಖಲಿಸಲಾಗಿದ್ದು, ನಿನ್ನೆ ರಾತ್ರಿಯೇ ಯುವಕರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.
ಇಂದು ಪೊಲೀಸ್ ವಶಕ್ಕೆ ತಗೆದುಕೊಂಡು ವಿಚಾರಣೆ ನಡೆಸುವ ಸಾಧ್ಯತೆಯಿದೆ.