ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಯಲ್ಲಿ ಸಾಂಖ್ಯಿಕ ಅಧಿಕಾರಿಯಾಗಿ ಮುಂಬಡ್ತಿ ಪಡೆಯಲು, ನಕಲಿ ಅಂಕಪಟ್ಟಿ ನೀಡಿರುವ ಆರೋಪದ ಮೇಲೆ ಪಾಲಿಕೆ ಅಧಿಕಾರಿ ವಿರುದ್ಧ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯಲ್ಲಿ ಸಾಂಖ್ಯಿಕ ಅಧಿಕಾರಿಯಾಗಿ ಮುಂಬಡ್ತಿ ಪಡೆದ ವಸಂತ ಅಣ್ಣಿಗೇರಿ ಪಾಲಿಕೆಯ ಆರೋಗ್ಯ ಇಲಾಖೆಯಲ್ಲಿ ಸಾಂಖ್ಯಿಕ ಅಧಿಕಾರಿಯಾಗಿ 2016 ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಮುಂಬಡ್ತಿ ಪಡೆಯುವಾಗ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮೈಸೂರಿನಲ್ಲಿ ಪದವಿ ಪಡೆದಿರುವುದಾಗಿ ಸುಳ್ಳು ಪ್ರಮಾಣಪತ್ರಗಳನ್ನು ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ ಬೆಂಗಳೂರು ಇಲ್ಲಿಗೆ ಸಲ್ಲಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಇದನ್ನೂ ಓದಿ: ಹುಬ್ಬಳ್ಳಿ ಟ್ರ್ಯಾಕ್ಟರ್ ಕಳವು ಪ್ರಕರಣ: ಮೂವರು ಆರೋಪಿಗಳ ಬಂಧನ
ಇತ್ತೀಚೆಗೆ ಅಂಕಪಟ್ಟಿ ಪರಿಶೀಲನೆ ನಡೆಸಿದಾಗ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಧಾರವಾಡ ಜಿಲ್ಲಾ ಸಂಖ್ಯಾ ಸಂಗ್ರಹಣಾ ಅಧಿಕಾರಿ ಸಾಯಿಕುಮಾರ ಎಸ್. ಹಿಳ್ಳಿ ಅವರು ದೂರು ನೀಡಿದ್ದಾರೆ.