ಧಾರವಾಡ: ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಸೋದರ ಮಾವನನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದೆ.
ವಿನಯ್ ಸೋದರ ಮಾವ ಚಂದ್ರಶೇಖರ ಇಂಡಿ ಅವರನ್ನು ವಿಜಯಪುರದಲ್ಲಿ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಹತ್ಯೆಗೆ ಶಸ್ತ್ರಾಸ್ತ್ರ ಪೂರೈಸಿದ ಆರೋಪ ಹಿನ್ನೆಲೆ ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆ ಧಾರವಾಡ ಉಪನಗರ ಪೊಲೀಸ್ ಠಾಣೆ ಎದುರಿಗೆ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದಾರೆ. ಮಾಜಿ ಸಚಿವ ವಿನಯ್ ಕುಲಕರ್ಣಿ ಸೋದರ ಮಾವ ಚಂದ್ರಶೇಖರ ಇಂಡಿ ಅವರನ್ನು ಧಾರವಾಡ ಉಪನಗರ ಠಾಣೆಗೆ ಕರೆ ತರುವ ಸಾಧ್ಯತೆಯಿದೆ. ಹಾಗಾಗಿ ಪೊಲೀಸರು ಸೂಕ್ತ ಬಿಗಿ ಭದ್ರತೆ ಒದಗಿಸಿದ್ದಾರೆ.
ಓದಿ: ಯೋಗೀಶಗೌಡ ಹತ್ಯೆ ಪ್ರಕಣರ : ವಿಚಾರಣೆಗೆ ಹಾಜರಾದ ವಿಜಯ್ ಕುಲಕರ್ಣಿ, ಚಂದ್ರಶೇಖರ ಇಂಡಿ
ಈಗಾಗಲೇ ಸಾಕಷ್ಟು ಬಾರಿ ಸಿಬಿಐ ಅಧಿಕಾರಿಗಳು ವಿನಯ್ ಸೋದರ ಮಾವನಿಗೆ ಡ್ರಿಲ್ ನಡೆಸಿದ್ದರು.