ETV Bharat / state

ಧಾರವಾಡ ಯೋಗೀಶಗೌಡ ಹತ್ಯೆ ಪ್ರಕರಣ: ಆರೋಪಿಗಳು 5 ದಿನ ಸಿಬಿಐ ವಶಕ್ಕೆ - Dharwad latest crime news

ಜಿಲ್ಲಾ ಪಂಚಾಯತ್​ ಸದಸ್ಯ ಯೋಗೀಶಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರು ಜನ ಆರೋಪಿಗಳನ್ನು 5 ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿ ಧಾರವಾಡ ಪ್ರಧಾನ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

CBI chargesheet Yogishagowda murder case
ಯೋಗೀಶಗೌಡ ಹತ್ಯೆ ಪ್ರಕರಣ: ಆರೋಪಿಗಳು ಸಿಬಿಐ ವಶಕ್ಕೆ
author img

By

Published : Mar 2, 2020, 3:24 PM IST

ಧಾರವಾಡ: ಜಿಲ್ಲಾ ಪಂಚಾಯತ್​ ಸದಸ್ಯ ಯೋಗೀಶಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರು ಜನ ಆರೋಪಿಗಳನ್ನು ಮಾ. 7ರ ವರೆಗೆ ಸಿಬಿಐ ವಶಕ್ಕೆ ನೀಡಿ ಪ್ರಧಾನ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಯೋಗೀಶಗೌಡ ಹತ್ಯೆ ಪ್ರಕರಣ: ಆರೋಪಿಗಳು ಸಿಬಿಐ ವಶಕ್ಕೆ

ದಿನೇಶ್​, ಸುನೀಲಕುಮಾರ, ನೂತನ್​, ಅಶ್ವತ್, ಶಾನವಾಜ್, ನಜೀರ್ ಅಹ್ಮದ ಬಂಧಿತ ಆರೋಪಿಗಳು. 2016ರ ಜೂನ್ 15ರಂದು ಯೋಗೀಶಗೌಡ ಅವರನ್ನು ಧಾರವಾಡದ ಸಪ್ತಾಪುರ ಜಿಮ್‌ನಲ್ಲಿ ಕೊಲೆ ನಡೆದಿತ್ತು. ‌ಸ್ಥಳೀಯ ಪೊಲೀಸರ ತನಿಖೆಯಲ್ಲಿ ಬಸವರಾಜ್​ ಮುತ್ತಗಿ ಸೇರಿ 6 ಜನ ಆರೋಪಿಗಳಾಗಿದ್ರು.‌ ಆದ್ರೆ ಸಿಬಿಐ ತನಿಖೆಯಲ್ಲಿ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ನಿನ್ನೆ ಬೆಂಗಳೂರಿನಲ್ಲಿ ಸಿಬಿಐ ಅಧಿಕಾರಿಗಳು 6 ಜನ ಆರೋಪಿಗಳನ್ನು ಬಂಧಿಸಿದ್ದರು.

ಆರೋಪಿಗಳನ್ನು ಭಾನುವಾರ ರಾತ್ರಿ ಬೆಂಗಳೂರಿನಿಂದ ಧಾರವಾಡಕ್ಕೆ ಕರೆ ತಂದಿದ್ದು, ನಿನ್ನೆ ಒಂದು ದಿನದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಇಂದು ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಿ, ಹೆಚ್ಚಿನ ತನಿಖೆ ಹಿನ್ನೆಲೆ ಸಿಬಿಐ ವಶಕ್ಕೆ ನೀಡುವಂತೆ ಕೋರಲಾಗಿತ್ತು. ಈ ಹಿನ್ನೆಲೆ ನ್ಯಾಯಾಧೀಶರು 5 ದಿನಗಳವರೆಗೆ ಆರೋಪಿಗಳನ್ನು ಸಿಬಿಐ ವಶಕ್ಕೆ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.