ಧಾರವಾಡ: ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ ಸಿಬಿಐಗೆ ನೀಡಿದ ಹಿನ್ನೆಲೆ ಸಿಬಿಐ ಅಧಿಕಾರಿಗಳು ದೂರು ದಾಖಲಿಸಿಕೊಂಡು ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಧಾರವಾಡದ ನಾಲ್ಕನೇ ಹೆಚ್ಚುವರಿ ಸತ್ರ ನ್ಯಾಯಾಲಯಕ್ಕೆ ಸಿಬಿಐ ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರದ ಅದೇಶದ ಹಿನ್ನೆಲೆ ಜಿಪಂ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ ಸಿಬಿಐಗೆ ವಹಿಸಲಾಗಿತ್ತು. ಸಿಬಿಐಗೆ ಪ್ರಕರಣ ನೀಡಿದ ಹಿನ್ನೆಲೆ ತನಿಖೆಯನ್ನು ಸಿಬಿಐ ತಂಡ ಚುರುಕುಗೊಳಿಸಿತ್ತು.
ದೂರು ದಾಖಲು ಮಾಡಿಕೊಂಡು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ವಿಚಾರಣೆ ಮಾಡಲಾಗುತ್ತಿದೆ. ಮುಂದಿನ ವಿಚಾರಣೆಯನ್ನು ಅ. 14ಕ್ಕೆ ನ್ಯಾಯಾಲಯ ಮೂಂದೂಡಿದೆ.